ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಜರ್ ರಾಧಿಕಾ ಸೆನ್‌ಗೆ ಸೇನಾ ಮುಖ್ಯಸ್ಥರಿಂದ ಅಭಿನಂದನೆ

Published 3 ಜೂನ್ 2024, 16:08 IST
Last Updated 3 ಜೂನ್ 2024, 16:08 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ವಾರ ವಿಶ್ವಸಂಸ್ಥೆಯಿಂದ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ  ಮೇಜರ್ ರಾಧಿಕಾ ಸೆನ್ ಅವರನ್ನು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸೋಮವಾರ ಸನ್ಮಾನಿಸಿದರು.

‘ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಮೇಜರ್ ರಾಧಿಕಾ ಸೆನ್ ಅವರಿಗೆ ‘2023 ಯುಎನ್ ಮಿಲಿಟರಿ ಜೆಂಡರ್ ಅಡ್ವೊಕೇಟ್ ಆಫ್ ದಿ ಇಯರ್ ಪ್ರಶಸ್ತಿ’ ಪ್ರದಾನ ಮಾಡಿದ್ದರು. ಮೇಜರ್‌ ರಾಧಿಕಾ ಸೇನ್‌ ಅವರನ್ನು ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಅವರು ನವದೆಹಲಿಯಲ್ಲಿ ಸನ್ಮಾನಿಸಿದರು’ ಎಂದು ಸೇನೆಯು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT