ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಣಿಪುರ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತೆ ಪರಿಶೀಲಿಸಿದ ಸೇನಾ ಮುಖ್ಯಸ್ಥ ಉಪೇಂದ್ರ

Published 24 ಆಗಸ್ಟ್ 2024, 5:43 IST
Last Updated 24 ಆಗಸ್ಟ್ 2024, 5:43 IST
ಅಕ್ಷರ ಗಾತ್ರ

ಇಂಫಾಲ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿಯವರು ಮಣಿಪುರದ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಅವಲೋಕನ ಮಾಡಿದರು. ಅವರು ಎರಡು ದಿನಗಳ ಮಣಿಪುರ ಪ್ರವಾಸದಲ್ಲಿದ್ದಾರೆ.

‘ಈಸ್ಟರ್ನ್ ಆರ್ಮಿ ಕಮಾಂಡರ್ ಜೊತೆಗೆ ಗಡಿಯಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಪ್ರದೇಶದ ಆಂತರಿಕ ಭದ್ರತಾ ಪರಿಸ್ಥಿತಿಯನ್ನು ಅವರು ಪರಿಶೀಲಿಸಿದರು’ ಎಂದು ಪ್ರಕಟಣೆ ತಿಳಿಸಿದೆ.

ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಒಟ್ಟಾಗಿ ಪ್ರದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಮಾಡುತ್ತಿರುವ ಪ್ರಯತ್ನವನ್ನು ಶ್ಲಾಘಿಸಿದರು. ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಅವರು, ರಾಷ್ಟ್ರ ನಿರ್ಮಾಣಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಿದರು. ಸಮುದಾಯಗಳ ನಡುವೆ ಮತ್ತು ಶಾಂತಿ ಮತ್ತು ಸೌಹಾರ್ದವನ್ನು ಹರಡುವಲ್ಲಿ ಸೇನಾ ಪಡೆಯ ಪ್ರಯತ್ನ ಮುಂದುವರಿಯಲಿ ಎಂದರು.

ಜನರಲ್ ದ್ವಿವೇದಿ ಅವರು ಶುಕ್ರವಾರ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರೊಂದಿಗೆ ಮಾತುಕತೆ ಕೂಡ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT