ನವದೆಹಲಿ: ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿದರೆ ಪ್ರತಿದಾಳಿ ನಡೆಸುವಂತೆ ಭಾರತ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಸೇನಾ ಕಮಾಂಡರ್ಗಳಿಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ.

ಮೇ 10-11ರ ರಾತ್ರಿ ನಡೆದ ಕದನ ವಿರಾಮ ಮತ್ತು ವಾಯುಪ್ರದೇಶ ಉಲ್ಲಂಘನೆಯ ಪರಿಣಾಮವಾಗಿ ಸೇನಾ ಮುಖ್ಯಸ್ಥರು ಪಶ್ಚಿಮ ಗಡಿಗಳ ಸೇನಾ ಕಮಾಂಡರ್ಗಳೊಂದಿಗೆ ಭದ್ರತಾ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಸೇನೆ ಮಾಹಿತಿ ನೀಡಿದೆ.

ಪಾಕಿಸ್ತಾನ ಬೆಂಬಲಿತ ಉಗ್ರರನ್ನು ಸದೆಬಡಿಯಲು ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಬಳಿಕ ಉಭಯ ರಾಷ್ಟ್ರಗಳ ನಡುವೆ ಸೃಷ್ಟಿಯಾಗಿದ್ದ ಯುದ್ಧದ ಸ್ವರೂಪದ ಸಂಘರ್ಷ ಕೊನೆಗೊಳಿಸಲು ಶನಿವಾರ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಪಾಕ್ ಮತ್ತೆ ದಾಳಿ ಆರಂಭಿಸಿತ್ತು.

ಎರಡೂ ದೇಶಗಳ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಪರಸ್ಪರ ಮಾತುಕತೆ ನಡೆಸಿ, ಶನಿವಾರ ಸಂಜೆಯಿಂದಲೇ ಸಂಘರ್ಷ ಕೊನೆಗಾಣಿಸಲು ಒಪ್ಪಿಗೆ ಸೂಚಿಸಿದ್ದರು. ಆದರೆ ಶನಿವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್ ಗಡಿಪ್ರದೇಶಗಳಲ್ಲಿ ಡ್ರೋನ್ ದಾಳಿಗೆ ಪಾಕ್ ಯತ್ನ ನಡೆಸಿದ್ದು, ಭಾರತ ತಕ್ಕ ಪ್ರತ್ಯುತ್ತರ ನೀಡಿತ್ತು.

ನಿರಂತರವಾಗಿ ದಾಳಿ ನಡೆಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸಶಸ್ತ್ರ ಪಡೆಯು ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪಾಕಿಸ್ತಾನದ ಎಂಟು ಮಿಲಿಟರಿ ನೆಲೆಗಳ ಮೇಲೆ ನಿಖರ ದಾಳಿ ನಡೆಸಿ ಭಾರಿ ಹಾನಿ ಉಂಟು ಮಾಡಿದೆ. ಅದರ ಬೆನ್ನಲ್ಲೇ, ಪಾಕಿಸ್ತಾನದ ಡಿಜಿಎಂಒ, ಭಾರತದ ಡಿಜಿಎಂಒ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದರು.
.ಪಾಕ್ ಉಗ್ರರ 9 ನೆಲೆಗಳು ಧ್ವಂಸ: 100ಕ್ಕೂ ಹೆಚ್ಚು ಉಗ್ರರ ಹತ್ಯೆ: DGMO ಮಾಹಿತಿ.ಭಾರತೀಯ ಸೇನೆಯ ಐವರು ಯೋಧರು ಹುತಾತ್ಮ, ಪಾಕ್ ಪಡೆಯ 35–40 ಸಿಬ್ಬಂದಿ ಸಾವು: DGMO.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.