ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಸೇನಾ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್

Published 5 ಮೇ 2024, 14:10 IST
Last Updated 5 ಮೇ 2024, 14:10 IST
ಅಕ್ಷರ ಗಾತ್ರ

ಸಾಂಗ್ಲಿ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ಹೊರಟಿದ್ದ ಸೇನೆಯ ಹೆಲಿಕಾಪ್ಟರ್‌ನ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ಮುನ್ನೆಚ್ಚರಿಕೆ ದೃಷ್ಟಿಯಿಂದ ಸಾಂಗ್ಲಿ ಜಿಲ್ಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂಗ್ಲಿ ಜಿಲ್ಲೆಯ ಮೀರಜ್ ತಾಲ್ಲೂಕಿನ ಎರಂಡೋಲಿ ಗ್ರಾಮದಲ್ಲಿ  ಶನಿವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು, ಮೂವರು ಸೇನಾ ಸಿಬ್ಬಂದಿ, ಇಬ್ಬರು ಪೈಲಟ್ ಮತ್ತು ಒಬ್ಬ ತಾಂತ್ರಿಕ ಸಿಬ್ಬಂದಿ ಹೆಲಿಕಾಪ್ಟರ್‌ನಲ್ಲಿ ಇದ್ದರು. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿಸಿದರು.

ಸ್ವಲ್ಪ ಸಮಯದ ನಂತರ ಮತ್ತೊಂದು ಹೆಲಿಕಾಪ್ಟರ್‌ನಲ್ಲಿ ಬಂದು ಸಿಬ್ಬಂದಿ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿದರು ಎಂದು ಅಧಿಕಾರಿಗಳು ತಿಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT