ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಸೇನಾ ವಾಹನದಲ್ಲಿ ಬೆಂಕಿ ಅವಘಡ– ಐವರು ಸೈನಿಕರ ಸಾವು

Last Updated 20 ಏಪ್ರಿಲ್ 2023, 15:55 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಸೇನಾ ವಾಹನದಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡದಿಂದ ಐವರು ಸೈನಿಕರು ಮೃತಪಟ್ಟಿದ್ದಾರೆ.‌

‘ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಪೂಂಛ್‌ ಜಿಲ್ಲೆಯ ಭಿಂಬರ್‌ ಗಲಿಯಿಂದ ಸಂಗಿಯೋಟ್‌ಗೆ ತೆರಳುತ್ತಿದ್ದ ರಾಷ್ಟ್ರೀಯ ರೈಫಲ್ಸ್‌ ಘಟಕಕ್ಕೆ ಸೇರಿದ ಸೇನಾ ವಾಹನದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಸೈನಿಕರು ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದರು’ ಎಂದು ಜಮ್ಮು ಮೂಲದ ರಕ್ಷಣಾ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದರು.

‘ಬೆಂಕಿ ಹೊತ್ತಿಕೊಳ್ಳುವುದಕ್ಕೆ ಕಾರಣಗಳೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದೂ ಅವರು ಹೇಳಿದರು.

ಈ ಘಟನೆಯು ಗ್ರೆನೇಡ್‌ ಎಸೆತದಿಂದ ಸಂಭವಿಸಿದೆಯೋ ಅಥವಾ ಈ ಪ್ರದೇಶದಲ್ಲಿ ಸತತ ಸುರಿಯುತ್ತಿರುವ ಮಳೆಯ ಸಂದರ್ಭ ಸಿಡಿಲು ಬಡಿದು ಬೆಂಕಿ ಹತ್ತಿಕೊಂಡಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT