ರಜೌರಿ/ಜಮ್ಮು : ಜಮ್ಮ ಕಾಶ್ಮೀರದ ರಜೌರಿ ಜಿಲ್ಲೆಯ ಸೇನಾ ಶಿಬಿರದ ಬಳಿ ಶನಿವಾರ ಮಂಜಾನೆ ಸಂಶಯಾಸ್ಪದ ಚಟುವಟಿಕೆ ಕಂಡುಬಂದದ್ದರಿಂದ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿ, ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದರ್ಹಾಲ್ ಪ್ರದೇಶದ ಶ್ರೋತ ಮೊರ್ಹಾ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕತ್ತಲೆಯ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಶಿಬಿರದ ಕಡೆಗೆ ಚಲಿಸುತ್ತಿರುವುದನ್ನು ಗಮನಿಸಿದ ಕಾವಲುಗಾರನು ಕೆಲವು ಸುತ್ತು ಗುಂಡು ಹಾರಿಸಿದ್ದಾನೆ ಎಂದು ಅವರು ಹೇಳಿದರು.

ಹತ್ತಿರದ ಹಳ್ಳಿಗೆ ಗುಂಪು ಸ್ಥಳಾಂತರಗೊಂಡಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಇನ್ನೂ ಶೋಧ ಕಾರ್ಯ ಮುಂದುವರೆಯುತ್ತಿದ್ದು, ಇಲ್ಲಿವರೆಗೆ ಶಂಕಿತ ಗುಂಪಿನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಜೌರಿ ಜಿಲ್ಲೆಯ ಶಾರದಾ ಷರೀಫ್ ಪ್ರದೇಶದಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.