ಸೇನೆಯ ತ್ರಿಶಕ್ತಿ ಪಡೆಯು ಬುಧವಾರ ತಡರಾತ್ರಿವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಿ ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿತು. ಅಲ್ಲಿ ಅವರಿಗೆ ಬೆಚ್ಚನೆಯ ಬಟ್ಟೆ, ಹೊದಿಕೆ, ಊಟ, ವೈದ್ಯಕೀಯ ನೆರವು ಒದಗಿಸಲಾಗಿದೆ. ಅಲ್ಲದೆ ಅವರು ರಾಜಧಾನಿ ಗ್ಯಾಂಗ್ಟಕ್‌ಗೆ ಮರಳಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.