ಜಮ್ಮು: ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಯ ಬೆನ್ನಲ್ಲೇ ಜಮ್ಮುವಿನ ಉದಂಪುರ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ತಡರಾತ್ರಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸೇನಾ ತುಕಡಿಗಳು ಡುಡು ಬಸಂತ್ಗರ್ ಬಳಿಯ ಕಾಡಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದವು. ಈ ವೇಳೆ ಉಗ್ರರು ಹಾಗೂ ಯೋಧರ ನಡುವೆ ಭೀಕರ ಗುಂಡಿನ ಕಾಳಗ ನಡೆದಿದೆ.

ಗುಂಡಿನ ಕಾಳಗದಲ್ಲಿ ಯೋದರೊಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಸ್ಥಳದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಮುಂದುವರೆದಿದ್ದು ಹೆಚ್ಚಿನ ತುಕಡಿಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಪಹಲ್ಗಾಮ್ ಪಟ್ಟಣ ಸಮೀಪದ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ ಗುಂಡಿನ ದಾಳಿ ನಡೆಸಿದ್ದರು. 28 ಮಂದಿ ಮೃತಪಟ್ಟು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ.
.Pahalgam Attack: ಇಂದು ಕಾಂಗ್ರೆಸ್ ಸಭೆ, ಅಮೆರಿಕ ಪ್ರವಾಸ ಮೊಟಕುಗೊಳಿಸಿದ ರಾಹುಲ್.Pahalgam Terror Attack: ಜಮ್ಮುವಿನಲ್ಲಿ ಸಿಲುಕಿಕೊಂಡಿರುವ ಹಾನಗಲ್ ಪ್ರವಾಸಿಗರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.