ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಅವರು ಅಧಿಕಾರ ಸ್ವೀಕರಿಸಿಕೊಂಡರೂ ಅಲ್ಲಿ ಇನ್ನೂ ಸೇನೆ ಆಡಳಿತ ನಡೆಸುತ್ತಿದೆ ಎಂದು ಕೇಂದ್ರ ಸಚಿವ ವಿ.ಕೆ. ಸಿಂಗ್ ಹೇಳಿದ್ದಾರೆ.

ಗಡಿಯಲ್ಲಿ ಒಳನುಸುಳುವಿಕೆ ಕುರಿತು ಪ್ರತಿಕ್ರಿಯಿಸಿರುವ ಅವರು, ವ್ಯಕ್ತಿಯೊಬ್ಬನಿಂದ ಬದಲಾವಣೆ ತರಲು ಸಾಧ್ಯವೇ ಎಂಬುದನ್ನು ಕಾದು ನೋಡಬೇಕಾಗಿದೆ ಎಂದಿದ್ದಾರೆ.

ಅನುಕೂಲಕರವಾದ ವಾತಾವರಣವಿದ್ದರೆ ಮಾತ್ರ ಪಾಕಿಸ್ತಾನದ ಜೊತೆ ಮಾತುಕತೆ ನಡೆಯಲಿದೆ ಎಂದೂ ಅವರು ಹೇಳಿದ್ದಾರೆ.

ಸಿಖ್ ಯಾತ್ರಿಕರಿಗಾಗಿ ಕರ್ತಾರ್ಪುರ ಗಡಿ ಕಾರಿಡಾರ್ ತೆರೆಯುವ ಕುರಿತ ವರದಿಗೆ ಪ್ರತಿಕ್ರಿಯಿಸಿದ ಸಿಂಗ್ ಅವರು, ಈ ಕುರಿತು ಪಾಕಿಸ್ತಾನದಿಂದ ಯಾವುದೇ ಪ್ರಸ್ತಾವ ಬಂದಿಲ್ಲ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.