ರಾಂಚಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರನ್ನು ಗುರುವಾರ 6 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

ಗುರುವಾರ ಬಿಗಿ ಭದ್ರತೆಯೊಂದಿಗೆ ಸಚಿವರನ್ನು ರಾಂಚಿಯ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು ಎಂದು ಇ.ಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಸತತ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇ.ಡಿ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರನ್ನು ಬಂಧಿಸಿತ್ತು. ಮಂಗಳವಾರವೂ ಆಲಂ ಅವರನ್ನು ಸುಮಾರು 9 ತಾಸು ಇ.ಡಿ ವಿಚಾರಣೆಗೆ ಒಳಪಡಿಸಿತ್ತು.
.ಹಣ ಅಕ್ರಮ ವರ್ಗಾವಣೆ | ಇ.ಡಿ ಎದುರು ವಿಚಾರಣೆಗೆ ಹಾಜರಾದ ಜಾರ್ಖಂಡ್ ಸಚಿವ ಆಲಂ.
ಕಳೆದ ವಾರ ಆಲಂ ಅವರ ಖಾಸಗಿ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆ ಕೆಲಸ ಮಾಡುತ್ತಿದ್ದ ಜಹಾಂಗೀರ್ ಆಲಂ ಅವರಿಗೆ ಸಂಬಂಧಿಸಿದ ಪ್ರದೇಶದಲ್ಲಿ ಸುಮಾರು ₹32 ಕೋಟಿ ನಗದು ಪತ್ತೆಯಾಗಿತ್ತು. ನಂತರ ಇಬ್ಬರನ್ನೂ ಇ.ಡಿ ಬಂಧಿಸಿತ್ತು.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ ಮತ್ತು ಲಂಚ ಪಡೆಯಲಾಗುತ್ತಿತ್ತು ಎಂಬ ಆರೋಪಕ್ಕೆ ಸಂಬಂಧಿಸಿಂತೆ ಇ.ಡಿ ತನಿಖೆ ನಡೆಸುತ್ತಿದೆ.
.ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಚಿವ ಆಲಂಗೀರ್ ಆಲಂ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.