ಇಟಾನಗರ: ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು (ಜೂನ್ 2) ಬೆಳಿಗ್ಗೆ ಆರಂಭವಾಗಿದೆ. ಈ ಎರಡೂ ರಾಜ್ಯಗಳಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯ ಮತದಾನ ಏಪ್ರಿಲ್ 19 ರಂದು ಏಕಕಾಲದಲ್ಲಿ ನಡೆದಿತ್ತು.

60 ಕ್ಷೇತ್ರಗಳನ್ನು ಒಳಗೊಂಡಿರುವ ಅರುಣಾಚಲ ಪ್ರದೇಶ ವಿಧಾನಸಭೆಯ 50 ಸ್ಥಾನಗಳಿಗೆ ಮತದಾನ ನಡೆದಿತ್ತು. ಆಡಳಿತಾರೂಢ ಬಿಜೆಪಿಯು 10 ಕ್ಷೇತ್ರಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ.

‘ವಿಧಾನಸಭಾ ಚುನಾವಣೆಯ ಮತ ಎಣಿಕೆಯು ರಾಜ್ಯದ 24 ಕೇಂದ್ರಗಳಲ್ಲಿ ಜೂನ್ 2ರಂದು ಬೆಳಿಗ್ಗೆ 6ರಿಂದ ಶುರುವಾಗಲಿದೆ. ಲೋಕಸಭಾ ಚುನಾವಣೆಯ ಮತಎಣಿಕೆ 25 ಕೇಂದ್ರಗಳಲ್ಲಿ ಜೂನ್ 4ರಂದು ನಡೆಯಲಿದೆ’ ಎಂದು ಅರುಣಾಚಲ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಪವನ್ ಕುಮಾರ್ ಸೇನ್ ತಿಳಿಸಿದ್ದಾರೆ.

‘ಮತ ಎಣಿಕೆಗಾಗಿ ಎರಡೂ ದಿನ (ಜೂನ್ 2 ಮತ್ತು ಜೂನ್ 4 ರಂದು) ಎರಡು ಸಾವಿರಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಹೇಳಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 60 ರಲ್ಲಿ 41 ಸ್ಥಾನಗಳನ್ನು ಜಯಿಸಿತ್ತು. ಜೆಡಿಯು 7, ಎನ್‌ಪಿಪಿ 5, ಕಾಂಗ್ರೆಸ್ 4 ಮತ್ತು ಪಿಪಿಎ 1 ಸ್ಥಾನ ಗೆದ್ದುಕೊಂಡಿ ದ್ದರೆ, ಎರಡು ಸ್ಥಾನಗಳಲ್ಲಿ ಪಕ್ಷೇತರರು ಜಯಿಸಿದ್ದರು.

ಸಿಕ್ಕಿಂನ 32 ಕ್ಷೇತ್ರಗಳ ಮತ ಎಣಿಕೆಗೆ ಸಕಲ ಸಿದ್ಧತೆ ನಡೆಸಲಾಗಿದೆ. 2019ರಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 17 ಹಾಗೂ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ 15 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.