ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರುಣಾಚಲ ಪ್ರದೇಶ, ಸಿಕ್ಕಿಂ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

Published 16 ಮಾರ್ಚ್ 2024, 10:46 IST
Last Updated 16 ಮಾರ್ಚ್ 2024, 10:46 IST
ಅಕ್ಷರ ಗಾತ್ರ

ನವದೆಹಲಿ: ಅರುಣಾಚಲ ಪ್ರದೇಶದ 60, ಸಿಕ್ಕಿಂನ 32 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 19ರಂದು ಚುನಾವಣೆ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಶನಿವಾರ ಘೋಷಿಸಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ಜೂನ್ 2024ಕ್ಕೆ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ವಿಧಾನಸಭಾ ಅವಧಿ ಮುಕ್ತಾಯಗೊಳ್ಳಲಿದೆ’ ಎಂದರು.

ಅರುಣಾಚಲ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಈಗಾಗಲೇ 60 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇಂಡಿಯಾ ಮೈತ್ರಿಕೂಟ, ಎನ್‌ಪಿಪಿ ಅಭ್ಯರ್ಥಿಗಳನ್ನು ಘೋಷಿಸಿಲ್ಲ. 2019ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 41 ಸ್ಥಾನಗಳನ್ನು ಗೆದ್ದಿದ್ದು, ಜೆಡಿಯು 7, ಕಾಂಗ್ರೆಸ್‌ 4 ಮತ್ತು ಎನ್‌ಪಿಪಿ ಸ್ಥಾನಗಳನ್ನು ಗೆದ್ದಿತ್ತು.

2019ರಲ್ಲಿ ನಡೆದ ಸಿಕ್ಕಿಂ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 17 ಸ್ಥಾನಗಳನ್ನು ಗೆದ್ದಿದ್ದು, ಸಿಕ್ಕಿಂ ಡೆಮೋಕ್ರೆಟಿಕ್‌ ಫ್ರಂಟ್‌ ಪಕ್ಷ 15 ಸೀಟುಗಳನ್ನು ಗೆದ್ದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT