ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಪುತ್ರಿ ಹರ್ಷಿತಾ ಕೇಜ್ರಿವಾಲ್ ಅವರು ಸ್ನೇಹಿತ ಸಂಭವ್ ಜೈನ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶುಕ್ರವಾರ(ಏ.18) ದೆಹಲಿಯ ಕಪುರ್ತಲಾ ಹೌಸ್ನಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಈ ಜೋಡಿ ನವ ಜೀವನಕ್ಕೆ ಕಾಲಿಟ್ಟಿದೆ.

ಇದಕ್ಕೂ ಮುನ್ನ ಗುರುವಾರ ಶಾಂಗ್ರಿ–ಲಾ ಹೋಟೆಲ್ನಲ್ಲಿ ವಿವಾಹ ಪೂರ್ವ ಕಾರ್ಯಕ್ರಮಗಳು ನಡೆದಿದ್ದು, ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ಮನೀಷ್ ಸಿಸೋಡಿಯಾ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ವಿವಾಹ ಪೂರ್ವ ಕಾರ್ಯಕ್ರದಲ್ಲಿ ಕೇಜ್ರಿವಾಲ್ ಅವರು ಪತ್ನಿ ಸುನಿತಾ ಅವರ ಜೊತೆಗೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಭಗವಂತ್ ಮಾನ್ ಕೂಡ ಪಂಜಾಬಿಯ ಜನಪ್ರಿಯ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಸಮಾರಂಭದ ಮೆರಗು ಹೆಚ್ಚಿಸಿದ್ದಾರೆ. ಈ ಕುರಿತ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

2018ರಲ್ಲಿ ಕೆಮಿಕಲ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪೂರ್ಣಗೊಳಿಸಿರುವ ಹರ್ಷಿತಾ ಅವರು 2021ರಲ್ಲಿ ಕರಣ್ ದ್ವಿವೇದಿ ಜೊತೆಗೂಡಿ ‘ಬೇಸಿಲ್ ಹೆಲ್ತ್’ ಎಂಬ ನವೋದ್ಯಮವನ್ನು ಸ್ಥಾಪಿಸಿದ್ದಾರೆ. ಸಂಭವ್ ಜೈನ್ ಅವರು ಪ್ರಸ್ತುತ ಜಿನೀ(Genie) ಎಂಬ ಖಾಸಗಿ ಕಂಪನಿಯಲ್ಲಿ ಯೋಜನಾ ನಿರ್ವಹಣಾ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.