ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್‌ಗೆ ಸಹಾನುಭೂತಿ ತೋರಬಾರದು: ಅಜಯ್‌ ಮಾಕೆನ್‌

Last Updated 17 ಏಪ್ರಿಲ್ 2023, 4:19 IST
ಅಕ್ಷರ ಗಾತ್ರ

ನವದೆಹಲಿ: ಭ್ರಷ್ಟಾಚಾರದ ಗಂಭೀರ ಆಪಾದನೆಗಳನ್ನು ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹಾಗೂ ಅವರ ಸಂಪುಟ ಸದಸ್ಯರಿಗೆ ಯಾವುದೇ ಬೆಂಬಲ ಮತ್ತು ಸಹಾನುಭೂತಿ ತೋರಬಾರದು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ನಾಯಕ ಅಜಯ್‌ ಮಾಕೆನ್‌ ಭಾನುವಾರ ಹೇಳಿದ್ದಾರೆ.

ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಮತ್ತು ಅವುಗಳನ್ನು ಒಂದೇ ವೇದಿಕೆಯಲ್ಲಿ ತರಲು ಗಂಭೀರ ಪ್ರಯತ್ನಗಳು ನಡೆಯುತ್ತಿರುವ ಸಮಯದಲ್ಲಿ ಮಾಕೆನ್‌ ಅವರು ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ವರಿಷ್ಠರ ನಿಲುವಿಗೆ ವಿರುದ್ಧವಾಗಿ ಮಾಕೆನ್‌ ಕೇಜ್ರಿವಾಲ್‌ ವಿರುದ್ಧ ಸರಣಿ ಟ್ವೀಟ್‌ ಸಮರ ನಡೆಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಅರವಿಂದ ಕೇಜ್ರಿವಾಲ್‌ ಅವರಿಗೆ ಸಿಬಿಐ ನೋಟಿಸ್‌ ಜಾರಿ ಮಾಡಿದ್ದ ಬೆನ್ನಲ್ಲೇ ಶನಿವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕೇಜ್ರಿವಾಲ್ ಅವರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಸೂಚಿಸಿದ್ದರು. ಬಿಜೆಪಿ ವಿರುದ್ಧ ಒಗ್ಗಟ್ಟು ಕಾಯ್ದುಕೊಳ್ಳುವಂತೆ ವಿಪಕ್ಷಗಳಿಗೆ ಕರೆ ಕೂಡ ನೀಡಿದ್ದರು. 2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಕೇಜ್ರಿವಾಲ್ ಕೂಡ ಕರೆ ನೀಡಿದ್ದರು.

‘ಲಿಕ್ಕರ್‌ ಗೇಟ್‌ ಮತ್ತು ಗೀಗೇಟ್ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಇವುಗಳಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆಯಾಗಬೇಕು. ಕೇಜ್ರಿವಾಲ್ ಅವರು ಭ್ರಷ್ಟ ಮಾರ್ಗದ ಮೂಲಕ ಗಳಿಸಿದ ಹಣವನ್ನು ಪಂಜಾಬ್, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ವಿರುದ್ಧ ಬಳಸಿದ್ದಾರೆ. ಇದನ್ನು ಕಾಂಗ್ರೆಸ್‌ ಸೇರಿ ಎಲ್ಲ ರಾಜಕೀಯ ನಾಯಕರು ಮರೆಯಬಾರದು’ ಎಂದು ಮಾಕೆನ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT