ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪುನರಾಯ್ಕೆಯಾಗಿದ್ದಾರೆ.
ಭಾನುವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ಆಯ್ಕೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಪಕ್ಷದ ನಾಯಕರಾದ ಪಂಕಜ್ ಗುಪ್ತಾ ಮತ್ತು ಎನ್.ಡಿ.ಗುಪ್ತಾ ಅವರು ಕ್ರಮವಾಗಿ ಕಾರ್ಯದರ್ಶಿ ಮತ್ತು ಖಜಾಂಚಿಯಾಗಿ ಆಯ್ಕೆಯಾದರು.ಮಂಡಳಿಯು ಕೇಜ್ರಿವಾಲ್ ಸೇರಿದಂತೆ 34 ಕಾರ್ಯಕಾರಿ ಸಮಿತಿ ಸದಸ್ಯರನ್ನು ಶನಿವಾರ ಆಯ್ಕೆ ಮಾಡಿತ್ತು.