ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಮೀನು ಸಿಕ್ಕರೂ ಸಿಎಂ ಕಚೇರಿಗೆ ಹೋಗುವಂತಿಲ್ಲ: ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌

Published 10 ಮೇ 2024, 11:20 IST
Last Updated 10 ಮೇ 2024, 11:20 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯಂತರ ಜಾಮೀನು ದೊರೆತರೂ ಮುಖ್ಯಮಂತ್ರಿ ಕಚೇರಿ ಹಾಗೂ ಸಚಿವಾಲಯಕ್ಕೆ ಹೋಗುವಂತಿಲ್ಲ, ಕಡತಗಳಿಗೆ ಸಹಿ ಹಾಕುವಂತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್‌ ಸೂಚಿಸಿದೆ.

ಜೊತೆಗೆ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನ ಪಾತ್ರದ ಬಗ್ಗೆ ಯಾವುದೇ ಹೇಳಿಕೆ ನೀಡುವಂತಿಲ್ಲ. ಪ್ರಕರಣದ ಸಾಕ್ಷಿಗಳ ಜೊತೆ ಚರ್ಚಿಸುವಂತಿಲ್ಲ. ಪ್ರಕರಣದಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ಕಡತಗಳನ್ನು ನೋಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕೇಜ್ರಿವಾಲ್ ವಿರುದ್ಧ ಗಂಭೀರ ಆಪಾದನೆಗಳನ್ನು ಮಾಡಲಾಗಿದೆ. ಆದರೆ ಅವರು ದೋಷಿಯಾಗಿಲ್ಲ .ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಮಗ್ರ ಮತ್ತು ಉದಾರ ದೃಷ್ಟಿಕೋನದಿಂದ ಜಾಮೀನು ನೀಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ನುಡಿದಿದೆ.

ವ್ಯಕ್ತಿಯೊಬ್ಬರ ಜಾಮೀನಿನೊಂದಿಗೆ ₹50 ಸಾವಿರ ಬಾಂಡ್‌ ಅನ್ನು ತಿಹಾರ್ ಜೈಲಿಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಕೇಜ್ರಿವಾಲ್‌ ಅವರಿಗೆ ಜೂನ್‌ 1ರವರೆಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT