ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು–ಕಾಶ್ಮೀರ: ದಿಗ್ಗಜರಿಂದ ಪ್ರಚಾರ

Published : 20 ಸೆಪ್ಟೆಂಬರ್ 2024, 15:27 IST
Last Updated : 20 ಸೆಪ್ಟೆಂಬರ್ 2024, 15:27 IST
ಫಾಲೋ ಮಾಡಿ
Comments

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಕಹಳೆ ಜೋರಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಪ್ರಮುಖ ನಾಯಕರು ದಣಿವರಿಯದೆ ಪ್ರಚಾರಕ್ಕೆ ಇಳಿದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಶನಿವಾರ (ಸೆಪ್ಟೆಂಬರ್ 21) ಜಮ್ಮುವಿಗೆ ಭೇಟಿ ನೀಡಿ, ರ‍್ಯಾಲಿಯಲ್ಲಿ ಪಾಲ್ಗೊಂಡು ತಮ್ಮ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಇದಕ್ಕೂ ಮುನ್ನ  ಸೆಪ್ಟೆಂಬರ್‌ 16ರಿಂದ ಸತತ ಮೂರು ರ‍್ಯಾಲಿಗಳಲ್ಲಿ ಭಾಗಿಯಾಗಿ ಸೆಪ್ಟೆಂಬರ್ 20ರಂದು ಹಿಂದಿರುಗಿದ್ದರು.

ರಾಜನಾಥ್‌ ಸಿಂಗ್‌ ಅವರು ಒಂದೇ ದಿನ ಸುಂದರಬನಿ, ಆರ್‌ಎಸ್ ಪೋರಾ, ಪೂಂಛ್‌ನಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ಮಾಜಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜಮ್ಮುವಿನ ಪೂರ್ವ ಸೆಗ್ಮೆಂಟ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಸೆಪ್ಟೆಂಬರ್ 23ರಂದು ಸೂರನಕೋಟೆಯಲ್ಲಿ ಮತಯಾಚಿಸಲಿದ್ದಾರೆ. ಇದಕ್ಕೂ ಮುನ್ನ ಸೆಪ್ಟೆಂಬರ್ 4ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT