ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರ್ಸ್‌ಗಳು, ಆಶಾ ಕಾರ್ಯಕರ್ತೆಯರು ನಿಜವಾದ ದೇಶಭಕ್ತರು: ರಾಹುಲ್‌ ಗಾಂಧಿ

Last Updated 10 ಏಪ್ರಿಲ್ 2020, 12:51 IST
ಅಕ್ಷರ ಗಾತ್ರ

ನವದೆಹಲಿ:ಕೋವಿಡ್‌–19 ವಿರುದ್ಧ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ನರ್ಸ್‌ಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ನಿಜವಾದ ದೇಶಭಕ್ತರು ಎಂದು ರಾಹುಲ್‌ಗಾಂಧಿ ಶುಕ್ರವಾರ ಹೇಳಿದ್ದಾರೆ.

ಭಯ ಮತ್ತು ತಪ್ಪು ಮಾಹಿತಿಯು ವೈರಸ್‌ಗಿಂತ ದೊಡ್ಡ ಅಪಾಯವನ್ನು ಉಂಟುಮಾಡಬಲ್ಲದು. ಇಂತಹ ವಾತಾವರಣದಲ್ಲಿ ಸಮುದಾಯ ಕಾರ್ಯಕರ್ತರು ಕೊರೊನಾ ವೈರಸ್‌ನ ಅಪಾಯಗಳು ಮತ್ತು ಅದು ಹರಡುವ ವಿಧಾನಗಳನ್ನು ಜನರಿಗೆ ತಿಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ರಾಹುಲ್‌ ಗಾಂಧಿ ತಿಳಿಸಿದರು.

ನರ್ಸ್‌ಗಳು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಪ್ರಾಣದ ಹಂಗು ತೊರೆದು ಧೈರ್ಯದಿಂದ ಕೋವಿಡ್‌–19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಸಂಕಷ್ಟ ಸ್ಥಿತಿಯಲ್ಲಿ ದೇಶ ಸೇವೆ ಮಾಡುವುದೇ ದೇಶಭಕ್ತಿಯ ನಿಜವಾದ ರೂಪ. ನಮ್ಮ ಸಮುದಾಯದ ಕಾರ್ಯಕರ್ತರು ನಿಜವಾದ ದೇಶಭಕ್ತರು. ಇಂತಹ ವಿಷಮ ಸ್ಥಿತಿಯಲ್ಲಿ ತಮ್ಮ ಸಮುದಾಯಗಳನ್ನು ಸುರಕ್ಷಿತವಾಗಿಡಲು ದಣಿವಿಲ್ಲದೆ ಶ್ರಮಿಸುತ್ತಿರುವವರೇನಮ್ಮ ನಾಯಕರು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ದೇಶಕ್ಕಾಗಿ ಸಮುದಾಯ ಕಾರ್ಯರ್ತರು ಮಾಡುತ್ತಿರುವ ತ್ಯಾಗಕ್ಕೆ ನಾವು ಅವರಿಗೆ ಮತ್ತು ಅವರ ಕುಟುಂಬದವರಿಗೆ ಋಣಿಯಾಗಿದ್ದೇವೆ. ಈ ಬಿಕ್ಕಟ್ಟು ಶಮನವಾದ ಬಳಿಕ ಅವರ ಅನುಕರಣೀಯ ಸೇವೆಯು ನಮಗೆ ಅದರ್ಶಪ್ರಾಯವಾಗಲಿದೆಎಂದು ಭಾವಿಸುತ್ತನೆ ಎಂದು ರಾಹುಲ್‌ಗಾಂಧಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT