ನವದೆಹಲಿ: ಕಿರುತೆರೆ ನಟ ಆಶಿಶ್ ಕಪೂರ್ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರದ ವಿಡಿಯೊ ಚಿತ್ರೀಕರಿಸಲಾಗಿದೆ ಎನ್ನಲಾದ ಮಹಿಳೆಯ ಮೊಬೈಲ್ ಫೋನ್ಗಾಗಿ ದೆಹಲಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಮನೆ ಪಾರ್ಟಿಯಲ್ಲಿ ತನಗೆ ಮದ್ಯ ಕುಡಿಸಿ, ಸ್ನಾನಗೃಹಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ ಈ ಹಿಂದೆ ಆರೋಪಿಸಿದ್ದರು. ಈ ಘಟನೆಯನ್ನು ತನ್ನ ಫೋನ್ನಲ್ಲಿ ಚಿತ್ರೀಕರಿಸಿ ನಂತರ ಫೋನ್ ಅನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆ ಆರೋಪಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಿಳೆ ಗದ್ದಲ ಸೃಷ್ಟಿಸುತ್ತಿದ್ದಾಳೆ ಎಂದು ಕಪೂರ್ ಅವರ ಸ್ನೇಹಿತರೊಬ್ಬರ ಪತ್ನಿ ಪೊಲೀಸರಿಗೆ ಕರೆ ಮಾಡಿ ಹೇಳಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ದೂರುದಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ತಮಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ವಿವರಿಸಿದ್ದರು.

ಆರಂಭದಲ್ಲಿ ಕಪೂರ್, ಅವರ ಸ್ನೇಹಿತ, ಸ್ನೇಹಿತನ ಪತ್ನಿ ಮತ್ತು ಇತರ ಇಬ್ಬರ ವಿರುದ್ಧ ಸಾಮೂಹಿಕ ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆ, ಬಳಿಕ ತಮ್ಮ ಹೇಳಿಕೆ ಹಿಂಪಡೆದು ಕಪೂರ್ ಮೇಲೆ ಅತ್ಯಾಚಾರ ಆರೋಪ ಮಾಡಿದ್ದರು.

ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ಕಪೂರ್ ಅವರ ಲೈಂಗಿಕ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಬಳಿಕ, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಪೂರ್ ಮತ್ತು ಅವರ ಸಹಚರರು ಕದ್ದಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿರುವ ಫೋನ್ ಅನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ತನಿಖೆಗೆ ಈ ಸಾಧನವು ನಿರ್ಣಾಯಕವಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಕಪೂರ್ ಅವರನ್ನು ಇತ್ತೀಚೆಗೆ ಪುಣೆಯಲ್ಲಿ ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.