ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಶೋಕ್ ಖರಾತ್ನನ್ನು ಬಂಧಿಸಲು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಇಲ್ಲಿನ ವಿಶೇಷ ನ್ಯಾಯಾಲಯ ಮಂಗಳವಾರ ಅನುಮತಿ ನೀಡಿದೆ.

ಈಗಾಗಲೇ ಅತ್ಯಾಚಾರ ಮತ್ತು ವಂಚನೆ ಪ್ರಕರಣಗಳಲ್ಲಿ ಸಿಲುಕಿ ನಾಸಿಕ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅಶೋಕ್ ಖರಾತ್ನನ್ನು ಇ.ಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇ.ಡಿ ಅಧಿಕಾರಿಗಳು ಅಶೋಕ್ ಖರಾತ್ನನ್ನು ಬಂಧಿಸಲು ಕೋರಿದ ಅನುಮತಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ನಡೆಸಿದ ನಂತರ ಇ.ಡಿ ಅಧಿಕಾರಿಗಳು ಆತನನ್ನು ಬಂಧಿಸಲಿದೆ. ನಂತರ ₹ 70 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಣ ಸುಲಿಗೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವುದು, ಅತ್ಯಾಚಾರ ಹಾಗೂ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಅಶೋಕ್ ಖರಾತ್ ಜೈಲಿನಲ್ಲಿದ್ದಾರೆ.

ನೂರಾರು ಕೋಟಿ ರೂಪಾಯಿ ಸುಲಿಗೆ, 'ಬೇನಾಮಿ' ಬ್ಯಾಂಕ್ ಖಾತೆಗಳ ಮೂಲಕ ₹ 70 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಆರೋಪ ಖರಾತ್ ಮೇಲಿದೆ. ಹಾಗೂ ಒಂದೇ ದಿನದಲ್ಲಿ 60 ಬ್ಯಾಂಕ್ಗಳ ಮೂಲಕ ಹಣ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.