ನವದೆಹಲಿ: ನೂತನವಾಗಿ ನೇಮಕಗೊಂಡ ನೀತಿ ಆಯೋಗದ ಉಪಾಧ್ಯಕ್ಷ ಅಶೋಕ್ ಲಾಹಿರಿ ಅವರು ಶನಿವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಶುಕ್ರವಾರ ಸರ್ಕಾರದ 'ಚಿಂತಕರ ಚಾವಡಿ'ಯು ಅಶೋಕ್ ಲಾಹಿರಿ ಅವರನ್ನು ಉಪಾಧ್ಯಕ್ಷರನ್ನಾಗಿ, ವಿಜ್ಞಾನಿ ಗೋವರ್ಧನ್ ದಾಸ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಪ್ರಧಾನ ಮಂತ್ರಿಯವರು ನೀತಿ ಆಯೋಗದ ಅಧ್ಯಕ್ಷರಾಗಿರುತ್ತಾರೆ.

ಇಬ್ಬರನ್ನು ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಅಭಿನಂದಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ಶಾಸಕರಾಗಿರುವ ಲಾಹಿರಿಯವರು ಈ ಹಿಂದೆ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಮತ್ತು 15ನೇ ಹಣಕಾಸು ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಬಂಗಾಳದಲ್ಲಿ ಈಗ ನಡೆಯುತ್ತಿರುವ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಿಲ್ಲ.

ಲಾಹಿರಿ ಭಾರತದ ಅತ್ಯಂತ ಅನುಭವಿ ಮತ್ತು ಹಿರಿಯ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರು. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ADB), ವಿಶ್ವ ಬ್ಯಾಂಕ್ ಮತ್ತು ಐಎಂಎಫ್ (IMF) ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಲಾಹಿರಿ, ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂದು ಮೂಲಗಳು ತಿಳಿಸಿವೆ.

ಗೋವರ್ಧನ್ ದಾಸ್ ಪ್ರತಿಕ್ರಿಯೆ...

ಗೋವರ್ಧನ್ ದಾಸ್ ಅವರು ತಮಗೆ ನೀತಿ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನು ಪಶ್ಚಿಮ ಬಂಗಾಳದ ಕುಗ್ರಾಮವೊಂದರ ಸಾಮಾನ್ಯ ದಲಿತ ರೈತ ಕುಟುಂಬದಿಂದ ಬಂದವನು. ಬಾಲ್ಯದಿಂದಲೂ ಕಠಿಣ ಪರಿಶ್ರಮ ಮತ್ತು ಹೋರಾಟದ ಮೂಲಕ ಬೆಳೆದು ಬಂದವನು. ಈ ಜವಾಬ್ದಾರಿ ನನಗೆ ಕೇವಲ ಒಂದು ಹುದ್ದೆಯಲ್ಲ, ಇದು ನನ್ನಂತಹ ಅಸಂಖ್ಯಾತ ಸಾಮಾನ್ಯ ಜನರ ಕನಸುಗಳು, ಭರವಸೆಗಳು ಮತ್ತು ನಂಬಿಕೆಗಳ ಪ್ರತಿಬಿಂಬವಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.