ಗುವಾಹಟಿ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪದಲ್ಲಿ ಬಂಧಿಸಲಾಗಿದ್ದ ವ್ಯಕ್ತಿ ಬೆಳಗಿನ ಜಾವ ಉದಲ್‌ಗಿರಿ ಜಿಲ್ಲೆಯಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ.

ಮೃತ ಕೈದಿ 38 ವರ್ಷದ ರಾಜೇಶ್ ಮುಂಡಾ ಎಂದು ಅಧಿಕಾರಿಗಳು ತಿಳಿಸಿದ್ಧಾರೆ. ಮಜ್ಬತ್‌ನಲ್ಲಿ ಆರೋಪಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ಸಂದರ್ಭ ಪೊಲೀಸರು ಗುಂಡಿನ ದಾಳಿ ನಡೆಸಿದ್ಧಾರೆ. ಬಳಿಕ, ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೊದಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ಧಾರೆ.

ಕಳೆದ 24 ಗಂಟೆಗಳಲ್ಲಿ ಅಸ್ಸಾಂನಲ್ಲಿ ಅತ್ಯಾಚಾರ ಆರೋಪಿ ಪೊಲೀಸ್ ಗುಂಡೇಟಿನಿಂದ ಸಾವಿಗೀಡಾಗಿರುವ ಎರಡನೇ ಪ್ರಕರಣ ಇದಾಗಿದೆ. ಮಂಗಳವಾರ ರಾತ್ರಿ, 16 ವರ್ಷದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ ಬಿಕಿ ಅಲಿ ಎಂಬಾತ ಪೊಲೀಸರ ಗುಂಡೇಟು ತಿಂದು ಅಸುನೀಗಿದ್ದ.

‘7 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 10 ರಂದು ಪ್ರಕರಣ ದಾಖಲಿಸಿಕೊಂಡಿದ್ದೆವು. ತನಿಖೆ ಬಳಿಕ ಮಂಗಳವಾರ ಆರೋಪಿ ರಾಜೇಶ್ ಮುಂಡಾ ಅವರನ್ನು ಬಂಧಿಸಲಾಗಿತ್ತು’ ಎಂದು ಹೆಚ್ಚುವರಿ ಎಸ್‌ಪಿ ಬಿದ್ಯುತ್ ದಾಸ್ ಬೊರೊ ತಿಳಿಸಿದ್ಧಾರೆ.

‘ಅಪರಾಧದ ಸ್ಥಳಕ್ಕೆ ಕರೆದೊಯ್ದಿದ್ದಾಗ ಆರೋಪಿ ನಮ್ಮ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆತ ಓಡುವುದನ್ನು ತಡೆಯಲು ಗುಂಡು ಹಾರಿಸಿದೆವು. ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಷ್ಟರೊಳಗೆ ಮೃತಪಟ್ಟಿದ್ದ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.