ಗುವಾಹಟಿ (ಪಿಟಿಐ): ಹಿಮಂತ ಬಿಸ್ವ ಶರ್ಮಾ ಅವರು ಅಸ್ಸಾಂ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ.

ಖಾನಾಪಾರಾದ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಮಂಗಳವಾರ ಬೆಳಿಗ್ಗೆ 11.40ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಲಕ್ಷ್ಮಣ ಪ್ರಸಾದ್ ಆಚಾರ್ಯ ಪ್ರತಿಜ್ಞಾವಿಧಿ ಬೋಧಿಸುವರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.

2021ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಹಿಮಂತ ಅವರು ಅಸ್ಸಾಂನಲ್ಲಿ ಸತತ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ಕಾಂಗ್ರೆಸ್ಸೇತರ ನಾಯಕ ಎನಿಸಿಕೊಳ್ಳಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-46252559

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.