ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಬಾಂಗ್ ಕಾಪ್‌‘ ಖ್ಯಾತಿಯ ಪೊಲೀಸ್‌ ಅಧಿಕಾರಿ ಜುನ್ಮೋನಿ ರಾಭಾ ಅಪಘಾತದಲ್ಲಿ ಸಾವು

Published 17 ಮೇ 2023, 2:59 IST
Last Updated 17 ಮೇ 2023, 2:59 IST
ಅಕ್ಷರ ಗಾತ್ರ

ನಾಗೂನ್‌: ಅಸ್ಸಾಂನಲ್ಲಿ ಲೇಡಿ ಸಿಂಗಂ, ದಬಾಂಗ್ ಕಾಪ್‌ ಎಂದು ಖ್ಯಾತಿಯಾಗಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು.

ನಾಗೂನ್‌ ನಗರದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅವರ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಅವರು ಒಬ್ಬರೇ ಇದ್ದರು ಎನ್ನಲಾಗಿದ್ದು ಪೊಲೀಸ್ ಸಮವಸ್ತ್ರದಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.

ಜುನ್ಮೋನಿ ರಾಭಾ ಅಸ್ಸಾಂ ಪೊಲೀಸ್‌ ಇಲಾಖೆಯಲ್ಲಿ ಎಸ್‌ಐ ಆಗಿ ಕೆಲಸ ಮಾಡುತ್ತಿದ್ದರು. ವಿವಾದಗಳಿಂದಾಗಿ ಅವರು ಹಲವು ಸಲ ಅಮಾನತುಗೊಂಡಿದ್ದರು.

ಹಲವು ಕಷ್ಟಕರ ಪ್ರಕರಣಗಳನ್ನು ಧೈರ್ಯವಾಗಿ ಎದುರಿಸಿದ್ದ ಅವರು, ಉದ್ಯೋಗದ ಹೆಸರಿನಲ್ಲಿ ವಂಚಿಸಿದ್ದ ಭಾವಿ ಪತಿಯನ್ನು ಬಂಧಿಸಿ ಪ್ರಶಂಸೆ ಪಡೆದಿದ್ದರು.

ಅಸ್ಸಾಂ ಪೊಲೀಸ್‌ ಅಧಿಕಾರಿಗಳು ಜುನ್ಮೋನಿ ರಾಭಾ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT