ಗುವಾಹಟಿ: ಅಸ್ಸಾಂನ 2 ಪ್ರತೇಕ ಸ್ಥಳಗಳಲ್ಲಿ ₹3 ಕೋಟಿಗೂ ಹೆಚ್ಚು ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡು ಇಬ್ಬರು ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಗುವಾಹಟಿಯ ಚಾಚಲ್ನಲ್ಲಿ ವಶಕ್ಕೆ ಪಡೆದುಕೊಂಡ ಮಾದಕ ವಸ್ತುವಿನ ಬೆಲೆ ₹1.8 ಕೋಟಿಗೂ ಹೆಚ್ಚು ಇರಬಹುದೆಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
.Assam Floods | ಮೃತರ ಸಂಖ್ಯೆ 19ಕ್ಕೆ ಏರಿಕೆ, ಸಂಕಷ್ಟದಲ್ಲಿ 7 ಲಕ್ಷ ಜನ.
ಅದೇ ದಿನ ಕಚಾರ್ ಜಿಲ್ಲೆಯ ಟೋಲೆನ್ಗ್ರಾಮ್ನಲ್ಲಿ ₹1.6 ಕೋಟಿ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದು, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎರಡು ಸ್ಥಳಗಳಲ್ಲಿ ವಶಕ್ಕೆ ಪಡೆದ ಮಾದಕ ವಸ್ತುಗಳ ಬೆಲೆ ಸುಮಾರು ₹3 ಕೋಟಿಗೂ ಅಧಿಕ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ‘ಮಾದಕ ವಸ್ತುಗಳ ಮಾರಾಟಗಾರರಿಗೆ ಮೋಜಿನ ವಾರಾಂತ್ಯವಾಗಿರಲಿಲ್ಲ. ಅವರ ನಿರೀಕ್ಷೆಯ ಪಾರ್ಟಿಗಳು ಎರಡು ಬಾರಿ ಹಾಳಾಗಿದೆ. ಇಷ್ಟಕ್ಕೆ ನಿಲ್ಲಿಸುವುದಿಲ್ಲ ವ್ಯಾಪಾರವನ್ನು ಪುಡಿ ಮಾಡುತ್ತೇವೆ‘ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.