ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ ಪ್ರವಾಹ: ಸಂಕಷ್ಟದಲ್ಲಿ 2.70 ಲಕ್ಷಕ್ಕೂ ಹೆಚ್ಚು ಜನ, ಅಮಿತ್ ಶಾ ನೆರವಿನ ಭರವಸೆ

Published 25 ಜೂನ್ 2023, 12:56 IST
Last Updated 25 ಜೂನ್ 2023, 12:56 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಭಾನುವಾರ ಸ್ವಲ್ಪ ಸುಧಾರಿಸಿದೆ. ನೀರಿನ ಮಟ್ಟ ಇಳಿಮುಖ ವಾಗುತ್ತಿದ್ದರೂ ಒಂಬತ್ತು ಜಿಲ್ಲೆಗಳಲ್ಲಿ 2.70 ಲಕ್ಷ ಜನರು ಸಂಕಷ್ಟದಲ್ಲಿದ್ದಾರೆ ಎಂದು ಅಧಿಕಾರಿ ಪ್ರಕಟಣೆ ತಿಳಿಸಿದೆ.

ಪ್ರವಾಹದಿಂದಾಗಿ ರಾಜ್ಯದಲ್ಲಿ ಈವರೆಗೂ ಮೂರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 120ಕ್ಕೂ ಹೆಚ್ಚು ಜನರನ್ನು ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಿಸಿದ್ದಾರೆ.

ಬಕ್ಸಾ, ದರಂಗ್, ಧುಬ್ರಿ, ಲಖಿಂಪುರ, ನಲ್ಬರಿ ಮತ್ತು ಉದಲ್ಗುರಿ ಸೇರಿ ಕೆಲ ಜಿಲ್ಲೆಗಳಲ್ಲಿ ಪ್ರವಾಹದಿಂದ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಬಾಧಿತ ರಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ತಿಳಿಸಿದೆ. 

ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ಜತೆ ಮಾತುಕತೆ ನಡೆಸಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸಾಧ್ಯವಿರುವ ನೆರವು ನೀಡುವ ಬಗ್ಗೆ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT