ಗುವಾಹಟಿ: ಅಸ್ಸಾಂನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಮುಂದುವರಿದಿದ್ದು, 21 ಜಿಲ್ಲೆಗಳಲ್ಲಿ ಸುಮಾರು ಏಳು ಲಕ್ಷ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಪ್ರವಾಹ ಹಾಗೂ ಭೂಕುಸಿತದಲ್ಲಿ ಮತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಬ್ರಹ್ಮಪುತ್ರ ಸೇರಿದಂತೆ ರಾಜ್ಯದ ಒಂಬತ್ತು ಪ್ರಮುಖ ನದಿಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ರಾಜ್ಯದಲ್ಲಿ 5,15,737 ಪ್ರಾಣಿಗಳು ಸಂಕಷ್ಟಕ್ಕೊಳಗಾಗಿವೆ.

405 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1,12,324 ನಿರಾಶ್ರಿತರು ಆಶ್ರಯ ಪಡೆದಿದ್ದಾರೆ. ರಾಜ್ಯದೆಲ್ಲೆಡೆ ರಸ್ತೆ, ಸೇತುವೆ, ವಿದ್ಯುತ್ ಕಂಬ, ಶಿಕ್ಷಣ ಸಂಸ್ಥೆ ಹಾಗೂ ಮೂಲಸೌಕರ್ಯಗಳಿಗೆ ಹಾನಿಯಾಗಿವೆ.

ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಹಲವೆಡೆ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
.Manipur Flood | ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ; 19 ಸಾವಿರ ಜನರಿಗೆ ಸಂಕಷ್ಟ.Arunachal Flood | ಭಾರಿ ಮಳೆ, ಭೂಕುಸಿತ: ಮೃತರ ಸಂಖ್ಯೆ 10ಕ್ಕೆ ಏರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.