ಗುವಾಹಟಿ: 'ಲವ್ ಜಿಹಾದ್' ಪ್ರಕರಣಗಳಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಭಾನುವಾರ ಹೇಳಿದ್ದಾರೆ.
ನಗರದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿರುವ ಅವರು, 'ಚುನಾವಣೆ ಸಂದರ್ಭದಲ್ಲಿ ನಾವು ಲವ್ ಜಿಹಾದ್ ಬಗ್ಗೆ ಮಾತನಾಡಿದ್ದೇವೆ. ಅಂತಹ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನನ್ನು ಶೀಘ್ರದಲ್ಲೇ ತರುತ್ತೇವೆ' ಎಂದಿದ್ದಾರೆ.
ಅಸ್ಸಾಂನಲ್ಲಿ ಜನಿಸಿದವರಿಗಷ್ಟೇ ರಾಜ್ಯದ ಸರ್ಕಾರಿ ನೌಕರಿ ಗಿಟ್ಟಿಸುವ ಅರ್ಹತೆ ನೀಡುವ ನೂತನ ವಾಸಸ್ಥಳ ನಿಯಮವನ್ನೂ ಶೀಘ್ರದಲ್ಲೇ ಪರಿಚಯಿಸಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ.
ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಸೃಷ್ಟಿಸಲಾಗಿರುವ ಒಂದು ಲಕ್ಷ ಸರ್ಕಾರಿ ನೌಕರಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲಾಗಿದೆ ಎಂದು ಪ್ರತಿಪಾದಿಸಿರುವ ಶರ್ಮಾ, ಸಂಪೂರ್ಣ ಪಟ್ಟಿ ಪ್ರಕಟವಾದಾಗ ಅದು ಬಹಿರಂಗವಾಗಲಿದೆ ಎಂದಿದ್ದಾರೆ.
ಹಿಂದೂ – ಮುಸ್ಲಿಮರ ಜಮೀನು ಮಾರಾಟಕ್ಕೆ ಸಂಬಂಧಿಸಿದಂತೆಯೂ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದೂ ಹೇಳಿದ್ದಾರೆ.