ತೇಜ್ಪುರ: ಅಸ್ಸಾಂನ ಆದಿವಾಸಿ ನ್ಯಾಷನಲ್ ಲಿಬರೇಷನ್ ಆರ್ಮಿಯ 46ಕ್ಕೂ ಹೆಚ್ಚು ಬಂಡುಕೋರರು ಭಾನುವಾರ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸೋನಿತ್ಪುರ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಭಾನುವಾರ ಹಿರಿಯ ಪೊಲೀಸ್ ಅಧಿಕಾರಗಳ ಸಮ್ಮುಖದಲ್ಲಿ ಶರಣಾಗಿದ್ದಾರೆ. ಇದೇ ವೇಳೆ ತಮ್ಮ ಬಳಿ ಇದ್ದ 8 ರೈಫಲ್ಗಳು, 6 ಪಿಸ್ತೂಲ್ಗಳು, 2 ಕಾರ್ಬೈನ್ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಳೆದ 4 ತಿಂಗಳ ಹಿಂದೆ ಅಸ್ಸಾಂ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರು. ಇದೀಗ ಶರಣಾಗಿರುವ ಎಲ್ಲರಿಗೂ ಕಾನೂನು ರೀತಿಯಲ್ಲಿ ಪರಿಹಾರ ನೀಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.