ಇಂಟರ್‌ನೆಟ್ ನಿಷೇಧ ಹಿಂದಕ್ಕೆ: ಸೋಮವಾರವಷ್ಟೇ ರಾಜ್ಯದ ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಗೆ ವಿಧಿಸಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿದೆ. ಸೆ.10ರಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಇಂಫಾಲ ಪೂರ್ವ, ಇಂಫಾಲ ಪಶ್ಚಿಮ, ತೌಬಾಲ್, ಕಕ್‌ಚಿಂಗ್ ಹಾಗೂ ಬಿಷ್ಣುಪುರ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ನಿರ್ಬಂಧಿಸಿತ್ತು.