ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ: ಸೇವೆಯಿಂದ ಪೊಲೀಸ್‌ ಅಧಿಕಾರಿ ವಜಾ

Published 6 ಏಪ್ರಿಲ್ 2024, 15:44 IST
Last Updated 6 ಏಪ್ರಿಲ್ 2024, 15:44 IST
ಅಕ್ಷರ ಗಾತ್ರ

ಗುವಾಹಟಿ: ದರಂಗ್‌ ಜಿಲ್ಲೆಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ರಾಜ್‌ ಮೋಹನ್‌ ರಾಯ್‌ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಭವಿಷ್ಯದಲ್ಲಿ ಉದ್ಯೋಗಕ್ಕೆ ಸೇರದಂತೆ ಅನರ್ಹಗೊಳಿಸಲಾಗಿದೆ ಎಂದು ಡಿಜಿಪಿ ಜಿ.ಪಿ ಸಿಂಗ್‌ ತಿಳಿಸಿದ್ದಾರೆ.

ಜೂನ್‌ 2022ರಲ್ಲಿ ಕೃಷ್ಣ ಕಮಾಲ್‌ ಬರುವಾದಲ್ಲಿ ಮನೆಗೆಲಸಕ್ಕಿದ್ದ 13 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಮತ್ತು ಹತ್ಯೆ ನಡೆದಿತ್ತು. ಆಗ ರಾಯ್‌ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದರು. ಘಟನೆಯ ಸಾಕ್ಷ್ಯಗಳ ಫೋಟೊ ಮತ್ತು ವಿಡಿಯೊ ಪಡೆಯುವಲ್ಲಿ ಪೊಲೀಸರು ಕರ್ತವ್ಯಲೋಪ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಎರಡು ತಿಂಗಳ ನಂತರ ಮುಖ್ಯಮಂತ್ರಿ ಹಿಮಂತ್‌ ಬಿಸ್ವ ಶರ್ಮಾ ಅವರು ಬಾಲಕಿಯ ನಿವಾಸಕ್ಕೆ ಭೇಟಿ ನೀಡಿದ್ದರು. ಬಳಿಕ ಅವರ ನಿರ್ದೇಶನದಂತೆ ಮೃತದೇಹವನ್ನು ಹೊರ ತೆಗೆದು, ಎರಡನೇ ಬಾರಿಗೆ ಶವಪರೀಕ್ಷೆ ನಡೆಸಿದಾಗ ಅತ್ಯಾಚಾರ ಮತ್ತು ಕೊಲೆ ನಡೆದಿರುವುದು ಬಹಿರಂಗವಾಗಿತ್ತು. ಈ ಬೆನ್ನಲ್ಲೇ ರಾಯ್‌ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT