ಗವಾಹಟಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಈ ರಾಜ್ಯದ ಹಲವು ಭಾಗಗಳಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ.

ಬುಧವಾರ ರಾತ್ರಿ ರಾಜ್ಯಸಭೆಯಲ್ಲಿ ಮಸೂದೆ ಜಾರಿಗೆ ಬಹುಮತದ ಒಪ್ಪಿಗೆ ಸಿಕ್ಕಿದ್ದು, ಈ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಳ್ಳಲು ಕಾರಣವಾಗಿದೆ. ಬುಧವಾರ ಬೆಳಗ್ಗೆಯಿಂದಲೇ ಕರ್ಫ್ಯೂ ಜಾರಿಯಲ್ಲಿದ್ದರೂ ಧಿಕ್ಕರಿಸಿದಸಾವಿರಾರು ಜನರುರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರು.

ಸೇನಾ ತುಕಡಿ, ಪೊಲೀಸರು ಸಾಕಷ್ಟು ಬಿಗಿ ಬಂದೋಬಸ್ತ್ ಕೈಗೊಂಡಿದ್ದರೂ ಪ್ರತಿಭಟನಾಕಾರರು ಚದುರಲಿಲ್ಲ. ರಸ್ತೆಗಿಳಿದು ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ಬರುವುದನ್ನು ಈಶಾನ್ಯ ರಾಜ್ಯಗಳಲ್ಲಿ ಈಗಾಗಲೇ ತೀವ್ರತರವಾದ ಪ್ರತಿರೋಧವ್ಯಕ್ತವಾಗುತ್ತಿದೆ. ಸ್ಥಳೀಯ ಸರ್ಕಾರಪ್ರತಿಭಟನೆಯನ್ನು ಹತ್ತಿಕ್ಕಲು ಸಾಧ್ಯವಾಗದ ಕಾರಣ ಕೇಂದ್ರದ ನೆರವು ಕೋರಿದೆ. ಈಗಾಗಲೇ ಸಾವಿರಾರು ಮಂದಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಗುರುವಾರ ಅಸ್ಸಾಂ ಪಟ್ಟಣವಾದ ಗವಾಹಟಿಯಲ್ಲಿ ಸೇನಾ ತುಕಡಿ ಹಾಗೂ ಪೊಲೀಸರು ಪಥಸಂಚಲನ ನಡೆಸಿದರು. ಪ್ರತಿಭಟನೆಯಿಂದಾಗಿ ಇಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ರೈಲು ಸಂಚಾರ, ಬಸ್ ಸಂಚಾರ ಹಾಗೂ ವಿಮಾನ ಸಂಚಾರದಲ್ಲಿ ವ್ಯತ್ಯಯಗೊಂಡಿದೆ. ಅಸ್ಸಾಂ, ನೆರೆ ರಾಜ್ಯವಾದ ತ್ರಿಪುರ ರಾಜ್ಯಗಳ ನಡುವೆ ಸಂಚರಿಸುವ ಹಲವು ರೈಲುಗಳನ್ನು ಮುಂಜಾಗ್ರತಾ ಕ್ರಮವಾಗಿ ನಿಲ್ಲಿಸಲಾಗಿದೆ.

ಇದನ್ನೂ ಓದಿ:Explainer | ಏನಿದು ಪೌರತ್ವ ತಿದ್ದುಪಡಿ ಮಸೂದೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.