ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಅಸ್ಸಾಂ ರೈಫಲ್ಸ್ ಯೋಧ

Published 24 ಜನವರಿ 2024, 7:19 IST
Last Updated 24 ಜನವರಿ 2024, 7:19 IST
ಅಕ್ಷರ ಗಾತ್ರ

ಅಸ್ಸಾಂ: ಅಸ್ಸಾಂ ರೈಫಲ್ಸ್ ಯೋಧನೊಬ್ಬ ತನ್ನೊಂದಿಗಿದ್ದ ಆರು ಸಹೋದ್ಯೋಗಿಗಳಿಗೆ ಗುಂಡು ಹಾರಿಸಿ, ಬಳಿಕ ಮಣಿಪುರದಲ್ಲಿ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡೇಟಿಗೆ ಒಳಗಾದ ಆರು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷಕ್ಕೆ ಸಂಬಂಧಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ದಕ್ಷಿಣ ಮಣಿಪುರದ ಮ್ಯಾನ್ಮಾರ್ ಗಡಿಯ ಬಳಿ ನಿಯೋಜಿಸಲಾದ ಅಸ್ಸಾಂ ರೈಫಲ್ಸ್ ಬೆಟಾಲಿಯನ್‌ನಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಮಣಿಪುರದಲ್ಲಿ ಈಗಾಗಲೇ ಗಲಾಟೆ ನಡೆಯುತ್ತಿರುವ ಕಾರಣ ಈ ಘಟನೆಯ ಬಗ್ಗೆ ವದಂತಿ ಹಬ್ಬದಂತೆ ತಡೆಯಲು ಮತ್ತು ಸತ್ಯಾಂಶ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT