ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ₹10 ಕೋಟಿ ಮೌಲ್ಯದ ಗಾಂಜಾ ವಶ– ಇಬ್ಬರ ಬಂಧನ

Published 24 ಜನವರಿ 2024, 13:42 IST
Last Updated 24 ಜನವರಿ 2024, 13:42 IST
ಅಕ್ಷರ ಗಾತ್ರ

ಗುವಾಹಟಿ: ಸುಮಾರು ₹10 ಕೋಟಿ ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಅಸ್ಸಾಂನ ಗುವಾಹಟಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಡಿಐಜಿ ಪಾರ್ಥಸಾರಥಿ ಮಹಾಂತ ನೇತೃತ್ವದ ಅಸ್ಸಾಂ ಪೊಲೀಸ್‌ನ ವಿಶೇಷ ಕಾರ್ಯಪಡೆ ಬಸಿಸ್ಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿದೆ. ಈ ವೇಳೆ ಕಚ್ಚಾ ರಬ್ಬರ್‌ನಡಿ 4 ಸಾವಿರ ಕೆ.ಜಿ ಗಾಂಜಾ ಸಾಗಿಸುತ್ತಿದ್ದ ಲಾರಿಯನ್ನು ಪರಿಶೀಲನೆ ನಡೆಸಿದ್ದಾರೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಶಪಡಿಸಿಕೊಳ್ಳಲಾದ ವಸ್ತುಗಳನ್ನು ತ್ರಿಪುರಾದಿಂದ ಮಧ್ಯಭಾರತದ ರಾಜ್ಯವೊಂದಕ್ಕೆ ಸಾಗಿಸಲಾಗುತ್ತಿತ್ತು. ವಶಪಡಿಸಿಕೊಂಡ ವಸ್ತುಗಳ ಮಾರುಕಟ್ಟೆ ಮೌಲ್ಯ ಸುಮಾರು ₹10 ಕೋಟಿ ಎಂದು ಡಿಐಜಿ ಮಹಾಂತ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT