ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ನಿವಾಸಕ್ಕೆ ನುಗ್ಗಿದ ಸ್ವಾತಿ, ಕೇಜ್ರಿವಾಲ್ ಮಾನಹಾನಿಗೆ BJP ಸಂಚು: AAP ಆರೋಪ

Published 17 ಮೇ 2024, 13:44 IST
Last Updated 17 ಮೇ 2024, 13:44 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಶುಕ್ರವಾರ ಆರೋಪಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಸಚಿವೆ ಅತಿಶಿ, ‘ಸ್ವಾತಿ ಮಾಲಿವಾಲ್‌ ಅವರು ಬಲವಂತವಾಗಿ ಸಿ.ಎಂ ನಿವಾಸಕ್ಕೆ ನುಗ್ಗಿದ್ದಾರೆ. ಆ ಸಂದರ್ಭದಲ್ಲಿ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್‌, ಸ್ವಾತಿಯನ್ನು ತಡೆಯಲು ಪ್ರಯತ್ನಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಸ್ವಾತಿ ಅವರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ, ಬಟ್ಟೆಯೂ ಹರಿದಿಲ್ಲ ಈ ಎಲ್ಲ ಅಂಶಗಳನ್ನು ವಿಡಿಯೊ ತುಣುಕಿನಲ್ಲಿ ನೋಡಬಹುದಾಗಿದೆ ಎಂದು ದೂರಿರುವ ಅತಿಶಿ, ಕೇಜ್ರಿವಾಲ್ ಅವರಿಗೆ ಮಾನಹಾನಿ ಮಾಡಲು ಬಿಜೆಪಿ ನಡೆಸುತ್ತಿರುವ ಷಡ್ಯಂತ್ರ ಇದಾಗಿದೆ ಎಂದಿದ್ದಾರೆ.

‘ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ್ದಾಗ, ಅವರ ಕಾರ್ಯದರ್ಶಿಯಾಗಿರುವ ಬಿಭವ್ ಕುಮಾರ್ ತಮ್ಮ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ದೈಹಿಕವಾಗಿ ಹಲ್ಲೆ ನಡೆಸಿದ್ದರು’ ಎಂದು ಸಂಸದೆ ಸ್ವಾತಿ ಮಾಲಿವಾಲ್‌ ಅವರು ಈಚೆಗೆ ಆರೋಪಿಸಿದ್ದರು.

ಸಿಎಂ ಕಚೇರಿಯಲ್ಲಿ ಪ್ರಮುಖ ಸ್ಥಾನದಲ್ಲಿರುವ ಬಿಭವ್‌ ಕುಮಾರ್ ವಿರುದ್ಧ ಕೇಳಿಬಂದ ಆರೋಪವು ಈಗ ವಿವಾದಕ್ಕೆ ತಿರುಗಿದ್ದು, ಪ್ರತಿಪಕ್ಷಗಳ ತೀವ್ರ ಟೀಕೆಗೂ ಗುರಿಯಾಗಿದೆ. ಎಎಪಿಯ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಅವರು ಕೂಡ ಹಲ್ಲೆ ಕೃತ್ಯವನ್ನು ಖಂಡಿಸಿದ್ದರು.

ಕೇಜ್ರಿವಾಲ್ ನಿವಾಸಕ್ಕೆ ಭೇಟಿ ನೀಡಿದ ವಿಧಿವಿಜ್ಞಾನ ತಜ್ಞರು

ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ಪೊಲೀಸರು, ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT