ಪಂಚರಾಜ್ಯ ಚುನಾವಣಾ ಫಲಿತಾಂಶ ಸೇರಿ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5,708 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ 21,866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಜಯ ಸಾಧಿಸಿದ್ದಾರೆ.
.ಬಾಗಲಕೋಟೆ: 21,866 ಮತಗಳಿಂದ ಉಮೇಶ ಮೇಟಿ ಜಯಭೇರಿ; ಸಿಎಂ ನಿರಾಳ .ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು.
ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿನ ಕಡೆ ಮುಖ ಮಾಡಿದೆ. ಇದರ ನಡುವೆಯೇ ಜಿದ್ದಾಜಿದ್ದಿನಿಂದ ಕೂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ದೀದಿ ಕೂಡ ಹಿನ್ನಡೆ ಅನುಭವಿಸಿದ್ದಾರೆ.
.West Bengal: ಭವಾನಿಪುರದಲ್ಲಿ ಮಮತಾಗೆ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಸೋಲು.
ಗುವಾಹಟಿ: ಚಹಾ ತೋಟಗಳ ನಾಡು ಎಂದೇ ಕರೆಸಿಕೊಳ್ಳುವ ಅಸ್ಸಾಂನಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದೆ. ಈ ಮೂಲಕ 10 ವರ್ಷಗಳ ಜಯದ ಬರ ನೀಗಿಸುವ ತವಕದಲ್ಲಿದ್ದ ಕಾಂಗ್ರೆಸ್ಗೆ ನಿರಾಸೆಯಾಗಿದೆ.
.Assam Result | ನೆಲಕಚ್ಚಿದ ಕಾಂಗ್ರೆಸ್, ಬಿಜೆಪಿಗೆ ಹ್ಯಾಟ್ರಿಕ್ ಗೆಲುವು.
ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಹೀನಾಯ ಸೋಲು ಅನುಭವಿಸಿದೆ. ಈ ಮೂಲಕ ಕಮ್ಯುನಿಸ್ಟ್ ಪಕ್ಷವು ಅಧಿಕಾರದಲ್ಲಿರುವ ಏಕೈಕ ರಾಜ್ಯವನ್ನೂ ಕಳೆದುಕೊಂಡಿದೆ.
.Assembly Election Results: ಏಕೈಕ ರಾಜ್ಯವನ್ನೂ ಕಳೆದುಕೊಂಡ ಸಿಪಿಎಂ.
ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೆರಿಯಲ್ಲಿ ಸತತ ಎರಡನೇ ಅವಧಿಗೆ ಎನ್ಡಿಎ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಆಗಿರುವ ಎನ್. ರಂಗಸಾಮಿ ಅವರು ತಟ್ಟಂಚವಾಡಿ ವಿಧಾನಸಭಾ ಕ್ಷೇತ್ರದಲ್ಲಿ 4,441 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಆ ಮೂಲಕ ಅವರು 5ನೇ ಬಾರಿ ಸಿಎಂ ಆಗಿ ಆಯ್ಕೆಯಾಗುವ ನಿರೀಕ್ಷೆಯಿದೆ.
.Puducherry Results| 5ನೇ ಬಾರಿಗೆ ಸಿಎಂ ಸ್ಥಾನಕ್ಕೆ ರಂಗಸಾಮಿ: ಏನಿವರ ಹಿನ್ನೆಲೆ?.
ಚೆನ್ನೈ: ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಧಿಕಾರದ ಗದ್ದುಗೆಗೆ ಸನಿಹವಾಗಿದೆ. ಇದರೊಂದಿಗೆ, ಚುನಾವಣೆ ಪ್ರಚಾರ ಸಂದರ್ಭದಲ್ಲಿ ವಿಜಯ ಅವರು ನೀಡಿದ್ದ ಭರವಸೆಗಳು ಈಗ ಮತ್ತೆ ಚರ್ಚೆಗೆ ಕಾರಣವಾಗಿವೆ.
.8 ಗ್ರಾಂ ಚಿನ್ನ, 6 ಸಿಲಿಂಡರ್: ಟಿವಿಕೆ ಭರವಸೆಗಳತ್ತ ಜನರ ಚಿತ್ತ.
ನವದೆಹಲಿ: ‘ಪಶ್ಚಿಮ ಬಂಗಾಳದ ಜನರು ಬಿಜೆಪಿಗೆ ಅದ್ಭುತವಾದ ಜನಾದೇಶವನ್ನು ನೀಡಿದ್ದು, ಅವರ ಕನಸು ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ನಮ್ಮ ಪಕ್ಷವು ಸಾಧ್ಯವಿರುವ ಎಲ್ಲವನ್ನೂ ಮಾಡಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
.ಈ ಚುನಾವಣೆಯ ನೆನಪು ಶಾಶ್ವತವಾಗಿ ಉಳಿಯಲಿದೆ: ಪ್ರಧಾನಿ ನರೇಂದ್ರ ಮೋದಿ.
ಬೆಂಗಳೂರು: ‘ಗ್ಯಾರಂಟಿ ಯೋಜನೆಗಳು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಿವೆ. ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶವಾಗಿದ್ದು, ಅಲ್ಲಿನ ಜನರ ನಾಡಿಮಿಡಿತ ಗ್ರಹಿಸಲು ಆಗಲಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಫಲಿತಾಂಶದ ಕುರಿತು ವಿಶ್ಲೇಷಿಸಿದರು.
.ಎರಡೂ ಕಡೆ ‘ಕೈ’ ಹಿಡಿದ ಗ್ಯಾರಂಟಿ: ಡಿ.ಕೆ. ಶಿವಕುಮಾರ್.
2026ರ ಐಪಿಎಲ್ ಟೂರ್ನಿಯಲ್ಲಿ ಆಟಗಾರರು ಗೆಳತಿಯರೊಂದಿಗೆ ಮೈದಾನದಲ್ಲಿ ಸಲುಗೆಯಿಂದ ಕಾಣಿಸಿಕೊಳ್ಳುತ್ತಿರುವುದು, ತಂಡದ ಬಸ್ಗಳನ್ನು ಗೆಳತಿಯರಿಗಾಗಿ ಕಾಯಿಸುವುದು ಕಂಡುಬಂದಿದ್ದು, ಆಟಗಾರರ ಈ ನಡೆಗೆ ಬಿಸಿಸಿಐ ಆಕ್ಷೇಪ ವ್ಯಕ್ತಪಡಿಸಿದೆ.
.IPL 2026: ಗೆಳತಿಯರೊಂದಿಗೆ ಸಲುಗೆ, ಸುತ್ತಾಟ; ಆಟಗಾರರ ನಡೆಗೆ ಬಿಸಿಸಿಐ ಆಕ್ಷೇಪ.
ನವದೆಹಲಿ: ನಟ ದರ್ಶನ್ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
.ಜೈಲಿನಲ್ಲಿ ದರ್ಶನ್ ಮೂಲಸೌಕರ್ಯ; ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.