ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Election: ಹರಿಯಾಣಗೆ ಅಕ್ಟೋಬರ್‌ 1, ಜಮ್ಮು& ಕಾಶ್ಮೀರಕ್ಕೆ ಮೂರು ಹಂತದಲ್ಲಿ ಮತದಾನ

Published : 16 ಆಗಸ್ಟ್ 2024, 10:28 IST
Last Updated : 16 ಆಗಸ್ಟ್ 2024, 10:28 IST
ಫಾಲೋ ಮಾಡಿ
Comments

ನವದೆಹಲಿ: ಚುನಾವಣಾ ಆಯೋಗವು ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಿದೆ.

ಶುಕ್ರವಾರ ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಿದ ಚುನಾವಣಾ ಆಯೋಗ ಮತದಾನ ಹಾಗೂ ಮತ ಎಣಿಕೆಯ ದಿನಾಂಕ ಪ್ರಕಟಿಸಿತು.

ಹರಿಯಾಣ...

ಹರಿಯಾಣ ರಾಜ್ಯದಲ್ಲಿ 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್‌ 1ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್‌ 4ರಂದು ಮತ ಎಣಿಕೆ ನಡೆಯಲಿದೆ.

ಮತದಾನ: ಅಕ್ಟೋಬರ್‌ 1

ಮತ ಎಣಿಕೆ: ಅಕ್ಟೋಬರ್‌ 4

ಜಮ್ಮು ಮತ್ತು ಕಾಶ್ಮೀರ...

ಜಮ್ಮು ಮತ್ತು ಕಾಶ್ಮೀರದ 90 ಸ್ಥಾನಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ರಾಜ್ಯದಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ.

ಸೆಪ್ಟೆಂಬರ್‌ 18, 25 ಹಾಗೂ ಅಕ್ಟೋಬರ್‌ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿತು. ಅಕ್ಟೋಬರ್‌ 4ರಂದು ಮತ ಎಣಿಕೆ ನಡೆಯಲಿದೆ.

ಮತದಾನ: ಸೆಪ್ಟೆಂಬರ್‌ 18, 25 ಹಾಗೂ ಅಕ್ಟೋಬರ್‌ 1

ಮತ ಎಣಿಕೆ: ಅಕ್ಟೋಬರ್‌ 4

ಸುಪ್ರೀಂಕೋರ್ಟ್‌ ವಿಧಿಸಿರುವ ಗಡುವಿನ ಪ್ರಕಾರ ಸೆಪ್ಟೆಂಬರ್‌ 30ರ ಒಳಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೂ ಚುನಾವಣೆ ನಡೆಸಬೇಕಿದೆ. ಹೀಗಾಗಿ ಚುನಾವಣಾ ಆಯೋಗವು, ಚುನಾವಣಾ ಸಿದ್ಧತೆಯ ಮೇಲ್ವಿಚಾರಣೆ ಸಲುವಾಗಿ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT