ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Rajasthan Election 2023: ಮಧ್ಯಾಹ್ನ 1ರವರೆಗೆ ಶೇ 40ರಷ್ಟು ಮತದಾನ

ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ 2023– 11ರವರೆಗೆ ಶೇ 25ರಷ್ಟು, ಮಧ್ಯಾಹ್ನ 1ರ ವೇಳೆಗೆ ಶೇ. 40.27ರಷ್ಟು ಮತದಾನ.
Published 25 ನವೆಂಬರ್ 2023, 9:41 IST
Last Updated 25 ನವೆಂಬರ್ 2023, 9:41 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಇಂದು ಬೆಳಿಗ್ಗೆ 7ರಿಂದ ಮತದಾನ ಆರಂಭವಾಗಿದೆ. ಮಧ್ಯಾಹ್ನ 1 ರವರೆಗೆ ಶೇ 40.27ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

51 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಬೆಳಿಗ್ಗೆಯಿಂದ ಮತದಾನ ಆರಂಭಗೊಂಡಿದೆ. ಸಂಜೆ 6ರವರೆಗೆ ಮತದಾನ ನಡೆಯಲಿದೆ.

ಮತದಾನದ ಮೊದಲ 2 ಗಂಟೆಗಳಲ್ಲಿ ಪ್ರತಿಶತ 10ರಷ್ಟು, 11ರವರೆಗೆ ಶೇ25 ಹಾಗೂ ಮಧ್ಯಾಹ್ನ 1ರ ವೇಳೆಗೆ ಶೇ 40.27ರಷ್ಟು ಮತದಾನವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಗಮ ಮತದಾನಕ್ಕಾಗಿ ಚುನಾವಣಾ ಆಯೋಗ ರಾಜ್ಯದಾದ್ಯಂತ 1.70 ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದೆ. ರಾಜ್ಯದಾದ್ಯಂತ ಸುಸೂತ್ರವಾಗಿ ಮತದಾನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹಲೋತ್‌, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್, ವಿಧಾನಸಭಾ ಸ್ಪೀಕರ್ ಸಿ.ಪಿ ಜೋಶಿ, ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್, ರಾಜೇಂದ್ರ ಯಾದವ್, ಮಹೇಂದ್ರಜೀತ್ ಸಿಂಗ್ ಮಾಳವಿಯಾ ಸೇರಿದಂತೆ ಹಲವಾರು ಸಚಿವರು ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ.

ಬಿಜೆಪಿಯಿಂದ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ವಿರೋಧ ಪಕ್ಷದ ಉಪನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ದಿಯಾ ಕುಮಾರಿ ಸೇರಿದಂತೆ ಇತತರು ಕಣದಲ್ಲಿದ್ದಾರೆ.

ಡಿ.3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT