ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರದ ರಾಷ್ಟ್ರೀಯ ನಗದೀಕರಣ ಯೋಜನೆಯನ್ನು (ಎನ್‌ಎಂಪಿ) ಖಂಡಿಸಿದ್ದು, ಇದು ದೇಶಕ್ಕೆ ಸೇರಿದ ಆಸ್ತಿಗಳನ್ನು ಮಾರಾಟ ಮಾಡುವ ಕುತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

ಎನ್‌ಎಂಪಿಯನ್ನು 'ಆಘಾತಕಾರಿ' ಹಾಗೂ 'ದುರದೃಷ್ಟಕರ' ನೀತಿ ಎಂದು ಹೇಳಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ, ದೇಶದ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ಸಿಗುವ ಹಣವನ್ನು ಚುನಾವಣೆಗಳಲ್ಲಿ ಬಿಜೆಪಿಯು ವಿರೋಧ ಪಕ್ಷಗಳ ವಿರುದ್ಧ ಬಳಕೆ ಮಾಡಲಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ನಾರಾಯಣ ರಾಣೆ ಮನೆ ಮುಂದೆ ಪ್ರತಿಭಟನೆ ನಡೆಸಿದ ಸೇನಾ ಕಾರ್ಯಕರ್ತರಿಂದ ಉದ್ಧವ್ ಭೇಟಿ

'ಈ ನಿರ್ಧಾರವನ್ನು ನಾವು ಖಂಡಿಸುತ್ತೇವೆ. ಈ ಆಸ್ತಿಗಳು ದೇಶಕ್ಕೆ ಸೇರಿವೆ. ಇದು ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿಗೆ ಸೇರಿದ್ದಲ್ಲ. ಕೇಂದ್ರ ಸರ್ಕಾರ ತಮ್ಮಇಚ್ಛೆಯಂತೆ ದೇಶದ ಆಸ್ತಿಯನ್ನು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು' ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಈ ಜನವಿರೋಧಿ ನೀತಿಯ ವಿರುದ್ಧ ಇಡೀ ದೇಶ ಒಗ್ಗಟ್ಟಾಗಿ ಹೋರಾಡಬೇಕು ಎಂದವರು ಪ್ರತಿಪಾದಿಸಿದರು.

'ಬಿಜೆಪಿಗೆ ನಾಚಿಕೆಯಾಗಬೇಕು. ರಾಷ್ಟ್ರದ ಆಸ್ತಿಯನ್ನು ಮಾರಾಟ ಮಾಡುವ ಹಕ್ಕನ್ನು ಅವರಿಗೆ ಯಾರೂ ನೀಡಿಲ್ಲ. ಇಡೀ ದೇಶವೇ ಇದರ ವಿರುದ್ಧ ಹೋರಾಡಲಿದೆ' ಎಂದು ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರದಂದು ರಾಷ್ಟ್ರೀಯ ನಗದೀಕರಣ ಯೋಜನೆಗೆ (ಎನ್‌ಎಪಿ) ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.