ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜಾತಶತ್ರು ವಾಜಪೇಯಿ ಅವರ 99ನೇ ಜನ್ಮದಿನ: ಗಣ್ಯರಿಂದ ಶುಭಾಶಯಗಳ ಮಹಾಪೂರ...

Published 25 ಡಿಸೆಂಬರ್ 2023, 5:43 IST
Last Updated 25 ಡಿಸೆಂಬರ್ 2023, 5:43 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ, ಶ್ರೇಷ್ಠ ವಾಗ್ಮಿ, ಕವಿ, ಬಿಜೆಪಿ ನಾಯಕ, ಅಜಾತಶತ್ರು ದಿವಂಗತ ಅಟಲ್​ ಬಿಹಾರಿ ವಾಜಪೇಯಿ ಅವರ 99ನೇ ಜನ್ಮ ದಿನೋತ್ಸವದ ಅಂಗವಾಗಿ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. 

ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ ಸೇರಿದಂತೆ ಹಲವರು ಗಣ್ಯರು‘ಸದೈವ್ ಅಟಲ್’ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಕುರಿತಾದ ವಿಡಿಯೊವನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, ಅಟಲ್ ಜೀ ಅವರ ಜಯಂತಿಯಂದು ದೇಶದ ಎಲ್ಲ ಕುಟುಂಬ ಸದಸ್ಯರ ಪರವಾಗಿ ಅವರಿಗೆ ನಮಿಸುತ್ತೇನೆ. ಅವರು ತಮ್ಮ ಜೀವನದುದ್ದಕ್ಕೂ ರಾಷ್ಟ್ರ ನಿರ್ಮಾಣದಲ್ಲಿ ನಿರತರಾಗಿದ್ದರು. ಭಾರತ ಮಾತೆಗೆ ಅವರ ಸಮರ್ಪಣಾ ಸೇವೆ ನಮಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ಮತ್ತು ನನ್ನ ಹಿರಿಯ ಸ್ನೇಹಿತ ವಾಜಪೇಯಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಜೆಡಿಎಸ್‌ ಹಿರಿಯ ನಾಯಕ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಟ್ವೀಟ್ ಮಾಡಿದ್ದಾರೆ.

ಸಂಸದೀಯ ಪಟು, ಕವಿ, ಶ್ರೇಷ್ಠ ಮಾರ್ಗದರ್ಶಕ, ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಪೂರ್ವಕ ನಮನಗಳು. ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನ ಎಂದು ಆಚರಿಸಲಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಅಶೋಕ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT