ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ತಳುಕು ಹಾಕಿಕೊಂಡಿರುವ ಭ್ರಷ್ಟಾಚಾರ ಹಾಗೂ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದಾರೆ.
‘ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಗೆ ಜೈಲಿನಂದಲೇ ಪತ್ರ ಬರೆದಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ತಮ್ಮ ಬದಲಿಗೆ ಅತಿಶಿಯವರು ತ್ರಿವರ್ಣ ಧ್ವಜ ಹಾರಿಸುವುದಾಗಿ ತಿಳಿಸಿದ್ದಾರೆ’ ಎಂದು ಎಎಪಿ ತಿಳಿಸಿದೆ.