ನವದೆಹಲಿ: ‘ಅಟ್ಲಾಸ್’ ಸೈಕಲ್ ಕಂಪನಿಯ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ (70) ಅವರು ದೆಹಲಿಯ ಎ.ಪಿ.ಜೆ ಅಬ್ದುಲ್ ಕಲಾಂ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಾಹ್ನ 2.30ರ ಸುಮಾರಿಗೆ ಕಪೂರ್ ಅವರು ತಮ್ಮ ಮನೆಯ ದೇವರ ಕೋಣೆಯಲ್ಲಿ ಕುಳಿತುಕೊಂಡು ಡೆತ್‌ನೋಟ್ ಬರೆದಿಟ್ಟು ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಡೆತ್‌ನೋಟ್‌ನಲ್ಲಿ ಕಪೂರ್ ಕೆಲವರ ಮೇಲೆ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ. ಘಟನೆ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.