ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ನಗರದಲ್ಲಿ ದರೋಡೆಗೆ ಸಂಚು: 6 ಮಂದಿ ಬಂಧನ

ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ ಕಾರ್ಯಾಚರಣೆ
Published 7 ಜನವರಿ 2024, 14:02 IST
Last Updated 7 ಜನವರಿ 2024, 14:02 IST
ಅಕ್ಷರ ಗಾತ್ರ

ಮುಂಬೈ: ಮುಂಬೈ ನಗರದಲ್ಲಿ ದರೋಡೆಗೆ ಸಂಚು ರೂಪಿಸಿದ್ದ ನವದೆಹಲಿ ಮತ್ತು ಉತ್ತರ ಪ್ರದೇಶ ಮೂಲದ ಆರು ಮಂದಿಯನ್ನು ಭಾನುವಾರ ಬಂಧಿಸಿರುವ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳವು (ಎಟಿಎಸ್) ಅವರ ಬಳಿಯಿದ್ದ ನಾಡಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದೆ. 

ಬೊರಿವಲಿ ರೈಲು ನಿಲ್ದಾಣದ ಬಳಿಯಿರುವ ಎಲ್ಲೋರ ಅತಿಥಿ ಗೃಹದಲ್ಲಿ ಕಾರ್ಯಾಚರಣೆ ನಡೆಸಿದ ಎಟಿಎಸ್ ಸಿಬ್ಬಂದಿ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ ಒಂದು ನಾಡಬಂದೂಕು, ಎರಡು ಪಿಸ್ತೂಲ್‌ಗಳು, ನಾಲ್ಕು ಮ್ಯಾಗಜಿನ್‌ಗಳು, 29 ಬುಲೆಟ್‌ಗಳು, ಚಾಕು, ಕಾರು ಮತ್ತು ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT