ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರರ ದಾಳಿ ಪ್ರಕರಣ: ಎನ್‌ಐಎಗೆ ವರ್ಗಾಯಿಸಿದ ಕೇಂದ್ರ

Published 17 ಜೂನ್ 2024, 8:09 IST
Last Updated 17 ಜೂನ್ 2024, 8:09 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರಾರ್ಥಿಗಳ ಬಸ್ ಮೇಲೆ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, 9 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. 33 ಮಂದಿ ಗಾಯಗೊಂಡಿದ್ದರು.

ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗುವ ಹಿನ್ನಲೆ ಸರಣಿ ಸಭೆ ನಡೆಸಿದ ಕೇಂದ್ರ ಗೃಹ ಅಮಿತ್ ಶಾ ಅವರು ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಿದ್ದಾರೆ.

ಜಮ್ಮು ವಿಭಾಗದಲ್ಲಿ ಪ್ರದೇಶಗಳ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವ ಹಾಗೂ ಭಯೋತ್ಪಾದನೆಯ ವಿಚಾರದಲ್ಲಿ ಶೂನ್ಯ ಸಹನೆಯ ಯೋಜನೆಗಳನ್ನು ಜಾರಿಗೆ ತರುವಂತೆ ಅಮಿತ್ ಶಾ ಅವರು ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಕ್ರಮಗಳ ಮೂಲಕ ಭಯೋತ್ಪಾದಕರನ್ನು ಮಟ್ಟ ಹಾಕಲು ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬದ್ಧವಾಗಿದೆ ಎಂದು ಅಮಿತ್ ಶಾ ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 13ರಂದು ಜಮ್ಮು ಮತ್ತು ಕಾಶ್ಮೀರ ಭದ್ರತೆ ವಿಚಾರವಾಗಿ ಉನ್ನತ ಮಟ್ಟದ ಸಭೆ ನಡೆಸಿ, ಭಯೋತ್ಪಾದನೆ ನಿಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT