ನವದೆಹಲಿ: ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡಿರುವ ಪಶ್ಚಿಮ ಬಂಗಾಳದ ಸಚಿವ ಜಾಕೀರ್ ಹೊಸೈನ್ ಮೇಲೆ ನಡೆದ ದಾಳಿಯ ಹಿಂದೆ ರಾಜಕೀಯ ದ್ವೇಷ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ರೈಲ್ವೆ ಪೊಲೀಸ್ ಅಧಿಕಾರಿಗಳು ಗುರುವಾರ ಹೇಳಿದ್ದಾರೆ.

ಈ ಘಟನೆಯ ಹಿಂದಿರುವ ಕಾರಣ ಟಿಎಂಸಿ ಕಾರ್ಯಕರ್ತರ ನಡುವಿನ ಆಂತರಿಕ ರಾಜಕೀಯ ದ್ವೇಷ ಅಥವಾ ಆಡಳಿತ ಪಕ್ಷ ಟಿಎಂಸಿ ಮತ್ತು ಸಿಪಿಐ ನಡುವಿನ ರಾಜಕೀಯ ದ್ವೇಷವಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಟಿಎಂಸಿ ಕಾರ್ಯಕರ್ತರ ನಡುವೆ ಆಂತರಿಕ ಜಗಳಗಳು ಇರುವ ಬಗ್ಗೆ ವರದಿಗಳೂ ಇವೆ. 2017ರಲ್ಲಿ ಜೀವ ಬೆದರಿಕೆ ಹಾಕುತ್ತಿದ್ದರು ಎನ್ನುವ ಕಾರಣಕ್ಕೆ ಹೊಸೈನ್ ಅವರು ಇಬ್ಬರು ಟಿಎಂಸಿ ಪಕ್ಷದ ಸದಸ್ಯರ ವಿರುದ್ಧ ಪೊಲೀಸ್ ದೂರು ಕೂಡ ದಾಖಲಿಸಿದ್ದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಕೀರ್ ಹೊಸೈನ್ ಅವರು ಕೋಲ್ಕತ್ತದ ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಸಂಜೆ ರೈಲಿಗಾಗಿ ಕಾಯುತ್ತಿರುವಾಗ ಅವರ ಮೇಲೆ ಕಚ್ಚಾ ಬಾಂಬ್ ಸ್ಫೋಟಸಲಾಗಿತ್ತು. ಸಚಿವರ ಜತೆಗೆ 25 ಮಂದಿ ಗಾಯಗೊಂಡಿದ್ದರು.

ಸಿಐಡಿಗೆ ಪ್ರಕರಣ

ಸಚಿವರ ಮೇಲಿನ ಬಾಂಬ್ ದಾಳಿ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳ ಸರ್ಕಾರ ಗುರುವಾರ ಸಿಐಡಿಗೆ ವಹಿಸಿದೆ.

‘ಸಚಿವರ ಮೇಲೆ ಬುಧವಾರ ರಾತ್ರಿ ಕಚ್ಚಾ ಬಾಂಬ್ ದಾಳಿ ನಡೆದಿರುವುದರ ಹಿಂದೆ ಬಹುದೊಡ್ಡ ಪಿತೂರಿಯಿದೆ. ನನ್ನ ಸಚಿವ ಸಂಪುಟದ ಸದಸ್ಯರನ್ನು ಕೊಲ್ಲಲು ನಡೆದ ದೊಡ್ಡ ಪಿತೂರಿ ಇದಾಗಿತ್ತು. ಜಾಕೀರ್ ಅವರನ್ನು ಕೆಲವರು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಕೆಲವು ತಿಂಗಳುಗಳಿಂದ ಒತ್ತಡ ಹೇರುತ್ತಿದ್ದರು. ಈಗ ತನಿಖೆ ನಡೆಯುತ್ತಿದೆ, ತನಿಖೆ ಮುಗಿಯುವರೆಗೂ ಅದನ್ನು ಬಹಿರಂಗಪಡಿಸುವುದಿಲ್ಲ’ ಎಂದು ಮಮತಾ ಬ್ಯಾನರ್ಜಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.