ಚೆನ್ನೈ: ತಮಿಳುನಾಡಿನ ಖ್ಯಾತ ಯುಟ್ಯೂಬರ್ ಶವುಕ್ಕು ಶಂಕರ್ ಅವರ ಚೆನ್ನೈ ನಿವಾಸದ ಮೇಲೆ ಗುಂಪೊಂದು ಸೋಮವಾರ ದಾಳಿ ಮಾಡಿದ್ದು, ಶಂಕರ್ ಅವರ ತಾಯಿಗೆ ಬೆದರಿಕೆ ಹಾಕಿದೆ ಎಂಬ ಆರೋಪವೂ ಕೇಳಿಬಂದಿದೆ.

ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಶಂಕರ್ ಅವರು ಈ ವೇಳೆ ಮನೆಯಲ್ಲಿರಲಿಲ್ಲ ಎನ್ನಲಾಗಿದೆ.

ದುಷ್ಕರ್ಮಿಗಳು ಪೌರ ಕಾರ್ಮಿಕರ ಸಮವಸ್ತ್ರ ಧರಿಸಿ ಮನೆಗೆ ನುಗ್ಗಿದ್ದು, ಮಾನವನ ಮಲ ಸೇರಿದಂತೆ ತ್ಯಾಜ್ಯಗಳನ್ನು ಮನೆಯ ಆವರಣದಲ್ಲಿ ಸುರಿದಿದ್ದಾರೆ. ಮನೆಯ ಬಾಗಿಲನ್ನೂ ಮುರಿದಿದ್ದು, ಸಾಮಾನುಗಳನ್ನು ಚೆಲ್ಲಾಪಿಲ್ಲಿಯಾಗಿ ಎಸೆದಿದ್ದಾರೆ. ಹೂಕುಂಡಗಳನ್ನು ಒಡೆದು ಹಾಕಿದ್ದು, ಈ ಎಲ್ಲ ದೃಶ್ಯಗಳು ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿವೆ.

ತಮಿಳುನಾಡಿನ ಡಿಎಂಕೆ ನೇತೃತ್ವದ ಸರ್ಕಾರದ ಕಟು ಟೀಕಾಕಾರರೂ ಆಗಿರುವ ಶಂಕರ್ ಅವರು, ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಆಕ್ಷೇಪಾರ್ಹವಾಗಿ ಮಾತನಾಡಿದ್ದ ಪ್ರಕರಣ ಸಂಬಂಧ ಜೈಲು ಶಿಕ್ಷೆಗೂ ಗುರಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.