ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿವಿಸಿ ಮುಂದೆ ಅಲೋಕ್‌ ಹಾಜರು

Last Updated 8 ನವೆಂಬರ್ 2018, 20:09 IST
ಅಕ್ಷರ ಗಾತ್ರ

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಅವರು ಕೇಂದ್ರ ಜಾಗೃತ ಆಯೋಗದ (ಸಿವಿಸಿ) ಮುಂದೆ ಗುರುವಾರ ಹಾಜರಾಗಿದ್ದಾರೆ. ಅಲೋಕ್‌ ಅವರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ಸಿವಿಸಿ ತನಿಖೆ ನಡೆಸುತ್ತಿದೆ. ತಮ್ಮ ವಿರುದ್ಧದ ಆರೋಪಗಳನ್ನು ಅಲೋಕ್‌ ಅವರು ಅಲ್ಲಗಳೆದಿದ್ದಾರೆ.

ಅಲೋಕ್‌ ವಿರುದ್ಧದ ತನಿಖೆಯ ವರದಿಯನ್ನುಸುಪ್ರೀಂ ಕೋರ್ಟ್‌ಗೆ ಸಿವಿಸಿ ಸೋಮವಾರದೊಳಗೆ ಸಲ್ಲಿಸಬೇಕಿದೆ. ಅಲೋಕ್‌ ಮತ್ತು ವಿಶೇಷ ನಿರ್ದೇಶಕ ರಾಕೇಶ್‌ ಅಸ್ತಾನಾ ಅವರ ನಡುವಣ ಕಿತ್ತಾಟದಿಂದಾಗಿ ಅವರಿಬ್ಬರನ್ನೂ ಕೇಂದ್ರ ಸರ್ಕಾರ ಕಡ್ಡಾಯ ರಜೆ ಮೇಲೆ ಕಳುಹಿಸಿದೆ. ಇದನ್ನು ಪ್ರಶ್ನಿಸಿ ಹಲವು ದೂರುಗಳು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT