ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂಹ್ ಹಿಂಸಾಚಾರ: ಕಲ್ಲು ತೂರಾಟದ ವೇಳೆ ಬಳಸಿದ್ದ ಕಟ್ಟಡಗಳ ನೆಲಸಮ

ನೂಹ್ ಹಿಂಸಾಚಾರ: ಮುಂದುವರಿದ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ
Published 6 ಆಗಸ್ಟ್ 2023, 11:18 IST
Last Updated 6 ಆಗಸ್ಟ್ 2023, 11:18 IST
ಅಕ್ಷರ ಗಾತ್ರ

ಗುರುಗ್ರಾಮ: ಹರಿಯಾಣದ ನೂಹ್‌ನಲ್ಲಿ ಸಂಭವಿಸಿದ ಹಿಂಸಾಚಾರ ವೇಳೆ ಕಲ್ಲು ತೂರಾಟ ನಡೆಸುವ ಸಲುವಾಗಿ ಬಳಸಿಕೊಂಡಿದ್ದರು ಎನ್ನಲಾದ ಹಲವು ಕಟ್ಟಡಗಳನ್ನು ಅಧಿಕಾರಿಗಳು ಭಾನುವಾರ ನೆಲಸಮ ಮಾಡಿದ್ದಾರೆ.

ಜಿಲ್ಲಾಡಳಿತ ಕೈಗೊಂಡಿರುವ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆ ನಾಲ್ಕನೇ ದಿನವೂ ಮುಂದುವರಿಯಿತು. 16 ಅಕ್ರಮ ಕಟ್ಟಡಗಳನ್ನು ಗುರುತಿಸಲಾಗಿದ್ದು, ಬುಲ್ಡೋಜರ್‌ ಬಳಸಿ ತೆರವುಗೊಳಿಸಲಾಯಿತು ಎಂದು ತಿಳಿಸಿದ್ದಾರೆ.

‘ವಿಎಚ್‌ಪಿ ಹಮ್ಮಿಕೊಂಡಿದ್ದ ಶೋಭಾಯಾತ್ರೆ ವೇಳೆ ಸಂಭವಿಸಿದ ಹಿಂಸಾಚಾರದ ವೇಳೆ ಗೂಂಡಾಗಳು ಕಲ್ಲುಗಳನ್ನು ತೂರಾಟ ನಡೆಸಲು ಈ ಅಕ್ರಮ ಕಟ್ಟಡಗಳನ್ನು ಬಳಸಿಕೊಂಡಿದ್ದರು’ ಎಂದು ಉಪವಿಭಾಗಾಧಿಕಾರಿ ಅಶ್ವನಿಕುಮಾರ್‌ ಹೇಳಿದ್ದಾರೆ.

‘ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಅನುಕೂಲವಾಗುವಂತೆ ಭಾನುವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ವರೆಗೆ ಕರ್ಫ್ಯೂ ಸಡಿಲಿಸಲಾಗಿತ್ತು’ ಎಂದು ಜಿಲ್ಲಾಧಿಕಾರಿ ಧೀರೇಂದ್ರ ಖಡ್ಗಟಾ ಹೇಳಿದ್ದಾರೆ.

ನಲ್ಹಾರ್ ವೈದ್ಯಕೀಯ ಕಾಲೇಜಿಗೆ ಸೇರಿದ 2.6 ಎಕರೆ ಪ್ರದೇಶದಲ್ಲಿ ಸೇರಿದಂತೆ 12 ವಿವಿಧ ಜಾಗಗಳಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡಗಳನ್ನು ಜಿಲ್ಲಾಡಳಿತ ಶನಿವಾರ ತೆರವುಗೊಳಿಸಿತ್ತು.

ಮಹಾಪಂಚಾಯತ್: ಗುರುಗ್ರಾಮ್‌ನ ಸೆಕ್ಟರ್‌–57ರಲ್ಲಿನ ಮಸೀದಿಗೆ ಬೆಂಕಿ ಹಚ್ಚಿದ ಹಾಗೂ ಇಮಾಮ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಯುವಕರನ್ನು ಬಂಧಿಸಿರುವುದನ್ನು ಪ್ರತಿಭಟಿಸಿ ತಿಗ್ರಾ ಗ್ರಾಮದಲ್ಲಿ ಹಿಂದೂ ಸಮುದಾಯದಿಂದ ಮಹಾಪಂಚಾಯತ್‌ ನಡೆಯಿತು.

‘ಬೆಂಕಿ ಹಚ್ಚಿದ ಹಾಗೂ ಇಮಾಮ್‌ ಹತ್ಯೆ ಪ್ರಕರಣಕ್ಕೂ ಬಂಧಿತರಿಗೂ ಯಾವುದೇ ಸಂಬಂಧ ಇಲ್ಲ’ ಎಂದು ಮಹಾಪಂಚಾಯತ್‌ನಲ್ಲಿ ಪಾಲ್ಗೊಂಡಿದ್ದವರು ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

ನೂಹ್‌ ಹಿಂಸಾಚಾರಕ್ಕೆ ಸಂಬಂಧಿಸಿ ನಾಲ್ವರು ಯುವಕರನ್ನು ಬಂಧಿಸಿದ್ದನ್ನು ಪ್ರತಿಭಟಿಸಿ ತಿಗ್ರಾ ಗ್ರಾಮದಲ್ಲಿ ಭಾನುವಾರ ಮಹಾಪಂಚಾಯತ್‌ ನಡೆಯುತ್ತಿದ್ದ ವೇಳೆ ಬಿಗಿ ಬಂದೋಬಸ್ತ್‌ ಹಾಕಲಾಗಿತ್ತು –ಪಿಟಿಐ ಚಿತ್ರ
ನೂಹ್‌ ಹಿಂಸಾಚಾರಕ್ಕೆ ಸಂಬಂಧಿಸಿ ನಾಲ್ವರು ಯುವಕರನ್ನು ಬಂಧಿಸಿದ್ದನ್ನು ಪ್ರತಿಭಟಿಸಿ ತಿಗ್ರಾ ಗ್ರಾಮದಲ್ಲಿ ಭಾನುವಾರ ಮಹಾಪಂಚಾಯತ್‌ ನಡೆಯುತ್ತಿದ್ದ ವೇಳೆ ಬಿಗಿ ಬಂದೋಬಸ್ತ್‌ ಹಾಕಲಾಗಿತ್ತು –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT