ಉಧಾಗಮಂಡಲಂ (ತ.ನಾಡು): ತಮಿಳುನಾಡಿನ ಜಿಲ್ಲೆಯೊಂದರಲ್ಲಿ ಕೋವಿಡ್-19 ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸುವ ನಿಟ್ಟಿನಲ್ಲಿ ಆಟೋ ಆಂಬುಲೆನ್ಸ್‌ಗಳ ಸೇವೆಗೆ ಚಾಲನೆ ನೀಡಲಾಗಿದೆ.

ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಆರು ಆಟೋ ಆಂಬುಲೆನ್ಸ್‌ಗಳ ಸೇವೆಗೆ ಅರಣ್ಯ ಸಚಿವ ಕೆ. ರಾಮಚಂದ್ರನ್ ಹಸಿರು ನಿಶಾನೆ ತೋರಿದರು.

ಇದನ್ನೂ ಓದಿ:ಒಡಿಶಾ: ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದಿದ್ದ ಆಶಾ ಕಾರ್ಯಕರ್ತೆ ಸಾವು

ಕಣಿವೆ ಜಿಲ್ಲೆಯಲ್ಲಿ ರಸ್ತೆಗಳು ಕಿರಿದಾಗಿದ್ದು, ತಿರುವುಗಳಿಂದ ಕೂಡಿರುವುದರಿಂದ ಆಂಬುಲೆನ್ಸ್‌ಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದಾಗಿ ಆಟೋ ಆಂಬುಲೆನ್ಸ್‌ಗಳನ್ನು ಪರಿಚಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಾಸಿಗೆ, ವೈದ್ಯಕೀಯ ಆಮ್ಲಜನಕ ಪೂರೈಕೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಲು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೈಗೊಂಡಿರುವ ಕ್ರಮಗಳ ಬಳಿಕ ಕೋವಿಡ್ ಸೋಂಕು ಪ್ರಕರಣಗಳು ಇಳಿಕೆಯಾಗಿವೆ ಎಂದವರು ಹೇಳಿದ್ದಾರೆ.

ಕೋವಿಡ್ ಸೋಂಕು ಪ್ರಕರಣಗಳು ಇಳಿಮುಖವಾಗಿರುವುದನ್ನು ಪರಿಗಣಿಸಿ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಅಲ್ಲದೆ ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.