ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಆಂಧ್ರಪ್ರದೇಶ: ಟ್ರಕ್‌ಗೆ ಗುದ್ದಿದ ಶಾಲಾ ಮಕ್ಕಳಿದ್ದ ಆಟೊ, 8 ಮಂದಿಗೆ ಗಾಯ

Published 22 ನವೆಂಬರ್ 2023, 9:36 IST
Last Updated 22 ನವೆಂಬರ್ 2023, 9:36 IST
ಅಕ್ಷರ ಗಾತ್ರ

ವಿಶಾಖಪಟ್ಟಣಂ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೊವೊಂದು ವೇಗವಾಗಿ ಚಲಿಸುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, 8 ಮಕ್ಕಳು ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. 

ಟ್ರಕ್‌ ಮತ್ತು ಆಟೊ ನಡುವಿನ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗಾಯಗೊಂಡ ಮಕ್ಕಳನ್ನು ಬೆಥನಿ ಶಾಲೆಯ ಮಕ್ಕಳು ಎಂದು ಗುರುತಿಸಲಾಗಿದ್ದು, ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಶಾಲೆಗೆ ಹೋಗುವಾಗ ಅಪಘಾತ ಸಂಭವಿಸಿದೆ.

ಅಪಘಾತ ನಡೆದ ಸೆಕುಂಡುಗಳಲ್ಲಿ ಸ್ಥಳದಲ್ಲಿದ್ದ ಬೈಕ್‌ ಮತ್ತು ಕಾರಿನ ಸವಾರರು ನುಜ್ಜುಗುಜ್ಜಾದ ಆಟೊದಿಂದ ಮಕ್ಕಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. 8 ಮಕ್ಕಳಲ್ಲಿ ಮೂವರಿಗೆ ಹೆಚ್ಚು ಗಾಯಗಳಾಗಿದ್ದು, ಒಬ್ಬ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ, ಚಿಕಿತ್ಸೆ ನೀಡಲಾಗುತ್ತಿದೆ, ಉಳಿದವರನ್ನು ಡಿಸ್ಚಾರ್ಜ್‌ ಮಾಡಿ ಮನೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶ್ರೀನಿವಾಸ್‌ ರಾವ್‌ ಹೇಳಿದ್ದಾರೆ.

ಆಟೊದಲ್ಲಿ ನಿಗದಿಗಿಂತ ಹೆಚ್ಚಿನ ಮಕ್ಕಳನ್ನು ಕರೆದೊಯ್ಯಲಾಗುತ್ತಿತ್ತು, ಆಟೊ ಮತ್ತು ಟ್ರಕ್‌ ಡ್ರೈವರ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದೂ ಅವರು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT